ಕರ್ನಾಟಕ

karnataka

ETV Bharat / bharat

AI ಮೂಲಕ ಪ್ರಧಾನಿ ಮೋದಿ - ಜಾರ್ಜಿಯಾ ವಿಡಿಯೋ ಟ್ಯಾಂಪರ್: ದೂರು ದಾಖಲು - PM MODI VIDEO TAMPERED

ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ವಿಡಿಯೊಗಳನ್ನು ಕೃತಕ ಬುದ್ಧಿಮತ್ತೆ ಸಹಾಯದಿಂದ ತಿರುಚಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಈ ಬಗ್ಗೆ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ.

PM Narendra Modi Italian Prime Minister Giorgia Meloni Video Tampered with AI Case Filed in Agra
ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (ETV Bharat Archive)

By ETV Bharat Karnataka Team

Published : Dec 20, 2024, 1:18 PM IST

ಆಗ್ರಾ, ಉತ್ತರಪ್ರದೇಶ:ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ವಿಡಿಯೊಗಳನ್ನು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ-ಎಐ) ಸಹಾಯದಿಂದ ಟ್ಯಾಂಪರ್ (ತಿದ್ದುವಿಕೆ) ಮಾಡಲಾಗಿ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಈ ಬಗ್ಗೆ ಆಗ್ರಾದ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಮೊಹಮ್ಮದ್ ಸೈಫ್ ಎಂಬ ಹೆಸರಿನಲ್ಲಿರುವ ಫೇಸ್​ಬುಕ್ ಐಡಿಯಲ್ಲಿ ಎಡಿಟ್ ಮಾಡಿರುವ ಈ ವಿಡಿಯೋ ಅಪ್​ಲೋಡ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಅಪ್‌ಲೋಡ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಸದಸ್ಯರು ದೂರು ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಮುಖಂಡರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಗುರುವಾರ ಬೆಳಗ್ಗೆ 10 ಗಂಟೆಗೆ ಮೊಹಮ್ಮದ್ ಸೈಫ್ ಅವರ ಫೇಸ್‌ಬುಕ್ ಐಡಿಯಿಂದ ಪೋಸ್ಟ್ ಮಾಡಿದ ವಿಡಿಯೊವನ್ನು ನಾನು ನೋಡಿರುವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಅವರ ಎಡಿಟ್​ ಮಾಡಲಾಗಿರುವ ವಿಡಿಯೋವನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ಜಗದೀಶಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಚಪುರಿ ನಿವಾಸಿ ಮನೋಜ್ ಕುಮಾರ್ ಹೇಳಿದ್ದಾರೆ.

ಈ ವಿಡಿಯೋವನ್ನು ಈವೆಂಟ್‌ವೊಂದರಿಂದ ತೆಗೆದುಕೊಳ್ಳಲಾಗಿದೆ. ಇದನ್ನು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​ ಮೂಲಕ ಎಡಿಟ್ ಮಾಡಲಾಗಿದೆ. ಎಡಿಟ್​ ಬಳಿಕ ಜಾಲತಾಣದಲ್ಲಿ ಅಪ್‌ಲೋಡ್ ಕೂಡ ಮಾಡಲಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಕೆಡಿಸುವ ಷಡ್ಯಂತ್ರ ನಡೆಸಲಾಗಿದೆ ಎಂದು ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಬಿಚ್‌ಪುರಿ ಮಂಡಲ್ ಅಧ್ಯಕ್ಷ ಪದಮ್ ಸಿಂಗ್, ಮಂಡಲ್ ಉಪಾಧ್ಯಕ್ಷ ಮನೋಜ್ ಕುಮಾರ್, ಬಿಜೆಪಿ ಉಪಾಧ್ಯಕ್ಷ ಸಂಜಯ್ ಸಿಂಗ್ ಸಿಸೋಡಿಯಾ ಮತ್ತು ಜೈ ಶಿವ್ ಮತ್ತು ಇತರ ಬಿಜೆಪಿ ಸದಸ್ಯರು ಒಟ್ಟಾಗಿ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಸೈಫ್ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಮನೋಜ್ ಕುಮಾರ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಗದೀಶ್‌ಪುರ ಪೊಲೀಸ್ ಠಾಣೆ ಪ್ರಭಾರಿ ಇನ್ಸ್‌ಪೆಕ್ಟರ್ ಆನಂದವೀರ್ ಸಿಂಗ್ ತಿಳಿಸಿದ್ದಾರೆ. ಬೋಡ್ಲಾ ನಿವಾಸಿ ಮೊಹಮ್ಮದ್ ಸೈಫ್ ಆರೋಪಿ ಆಗಿದ್ದು, ಐಟಿ ಕಾಯ್ದೆಯ ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಆರಂಭಗೊಂಡಿದ್ದು, ಸೈಬರ್ ಸೆಲ್ ನೆರವು ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 'ಸ್ನೇಹಿತರ ಭೇಟಿಯಾಗುವುದು ಎಂದಿಗೂ ಸಂತೋಷವೇ': 'ಮೆಲೋಡಿ' ಸೆಲ್ಫಿಗೆ ಪ್ರಧಾನಿ ಮೋದಿ ಬಣ್ಣನೆ - ಪ್ರಧಾನಿ ನರೇಂದ್ರ ಮೋದಿ

ABOUT THE AUTHOR

...view details