ಕೌಶಾಂಬಿ, ಉತ್ತರಪ್ರದೇಶ: ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರು ಅದೇ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರಾಂಶುಪಾಲರು ವಿದ್ಯಾರ್ಥಿನಿಗೆ ಸಹಾಯ ಮಾಡುವ ನೆಪದಲ್ಲಿ ಬಹಳ ದಿನಗಳಿಂದ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಆರೋಪಿಯ ಅಶ್ಲೀಲ ವಿಡಿಯೋ ಬಹಿರಂಗವಾದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆರೋಪಿತ ಪ್ರಾಂಶುಪಾಲರ ಬಂಧನಕ್ಕೆ ಹಲವು ತಂಡಗಳನ್ನು ನಿಯೋಜಿಸಲಾಗಿದೆ.
ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಪ್ರಾಂಶುಪಾಲರನ್ನು ಡಿ.ಕೆ.ಮಿಶ್ರಾ ಎಂದು ಹೇಳಲಾಗಿದೆ. ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಕುಟುಂಬದ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ. ಪ್ರಾಂಶುಪಾಲರು ಸಹಾಯ ಮಾಡುವ ನೆಪದಲ್ಲಿ ಅವರ ಕುಟುಂಬಕ್ಕೆ ಆಪ್ತರಾಗಿದ್ದರು ಎನ್ನಲಾಗಿದೆ. ಇದಾದ ಬಳಿಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ವಿದ್ಯಾರ್ಥಿನಿಯರ ಮನೆಗೂ ಹೋಗುತ್ತಿದ್ದರು. ಈತ ವಿದ್ಯಾರ್ಥಿನಿಗೆ ಬಹಳ ದಿನಗಳಿಂದ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.