ಹೈದರಾಬಾದ್:ಕಾಂಗ್ರೆಸ್ ನಾಯಕ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಹೈದರಾಬಾದ್ಗೆ ಆಗಮಿಸುತ್ತಿದ್ದು, ತೆಲಂಗಾಣ ಸರ್ಕಾರದ ಜಾತಿ ಗಣತಿ ಸಮೀಕ್ಷೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ನೀಡಿದ ಮಾಹಿತಿ ಪ್ರಕಾರ, ರಾಹುಲ್ ಗಾಂಧಿ ಉತ್ತರ ಪ್ರದೇಶದ ಫುರ್ಸತ್‌ಗುಂಜ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಂಜೆ 4.45ಕ್ಕೆ ಹೈದರಾಬಾದ್ಗೆ ಆಗಮಿಸುವರು.
ಬೋವೆನಪಲ್ಲಿಯಲ್ಲಿರುವ ಗಾಂಧಿ ಸಿದ್ಧಾಂತ ಕೇಂದ್ರಕ್ಕೆ ತೆರಳಿ ಸಂಜೆ 6.30ರವರೆಗೆ ಜಾತಿ ಗಣತಿ ಕುರಿತು ರಾಜ್ಯ ಮಟ್ಟದ ಸಮಾಲೋಚನೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ದೆಹಲಿಗೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.