ಕರ್ನಾಟಕ

karnataka

ETV Bharat / bharat

ಓಂ ಬಿರ್ಲಾ ಲೋಕಸಭೆ ಸ್ಪೀಕರ್ ಆಗಿ ಮುಂದುವರೆಯುವ ಸಾಧ್ಯತೆ: ಒಮ್ಮತ ಮೂಡಿಸಲು ರಾಜನಾಥ್​​​​ರಿಂದ ಪ್ರತಿಪಕ್ಷಗಳ ನಾಯಕರ ಭೇಟಿ - Lok Sabha Speaker - LOK SABHA SPEAKER

ಲೋಕಸಭೆಯ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ಸಹಕಾರ ನೀಡುವಂತೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ವಿರೋಧ ಪ್ರಕ್ಷಗಳಿಗೆ ಮನವಿ ಮಾಡಿದ್ದಾರೆ. ಓಂ ಬಿರ್ಲಾ ಅವರು ಮತ್ತೆ ಲೋಕಸಭೆ ಸ್ಪೀಕರ್ ಆಗಿ ಮುಂದುವರೆಯುವ ಸಾಧ್ಯತೆಯಿದೆ.

Om Birla  Lok Sabha Speaker  Rajnath Singh
ಓಂ ಬಿರ್ಲಾ (ANI)

By ETV Bharat Karnataka Team

Published : Jun 25, 2024, 11:22 AM IST

Updated : Jun 25, 2024, 11:34 AM IST

ನವದೆಹಲಿ: ಲೋಕಸಭೆಯ ಸ್ಪೀಕರ್ ಹುದ್ದೆಗೆ ನಾಮ ನಿರ್ದೇಶನಕ್ಕೆ ಗಡುವು ಸಮೀಪಿಸುತ್ತಿರುವಂತೆಯೇ, ಹಿರಿಯ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಸರ್ಕಾರದ ಪರವಾಗಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿ ಒಗ್ಗಟ್ಟು ಮೂಡಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಸಂಸತ್ತಿನ ಕೆಳಮನೆಯ ಸ್ಪೀಕರ್ ಮತ್ತು ಉಪಸಭಾಪತಿ ಹುದ್ದೆಗೆ ಇಬ್ಬರು ನಾಯಕರನ್ನು ಆಯ್ಕೆ ಮಾಡಲು ಕಸರತ್ತು ಜೋರಾಗಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆಯ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ಸಹಕಾರ ನೀಡುವಂತೆ ರಾಜನಾಥ್ ಸಿಂಗ್ ಅವರು ವಿರೋಧ ಪ್ರಕ್ಷಗಳಿಗೆ ಮನವಿ ಮಾಡಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕೂಡ ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ. ಇಂಡಿಯಾ ಒಕ್ಕೂಟದಿಂದ ತನ್ನ ಅಭ್ಯರ್ಥಿಯನ್ನು ಘೋಷಿಸಿದರೆ, ಕೆಳಮನೆಯ ಸ್ಪೀಕರ್‌ಗೆ ಚುನಾವಣೆ ನಡೆಯುವುದು ಇದೇ ಮೊದಲು. ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತದಿಂದ ಆಯ್ಕೆ ಮಾಡಲಾಗಿದೆ.

ಆಡಳಿತಾರೂಢ ಮೈತ್ರಿಕೂಟವು ತನ್ನ ಸ್ಪೀಕರ್ ಅಭ್ಯರ್ಥಿಯನ್ನು ಹೆಸರಿಸದಿದ್ದರೂ, 17ನೇ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರನ್ನು ಆ ಸ್ಥಾನಕ್ಕೆ ನಾಮನಿರ್ದೇಶನ ಮಾಡುವ ಸಾಧ್ಯತೆ ಹೆಚ್ಚಿದೆ. ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರ ಹೆಸರು ಕೂಡ ಮುಂಚೂಣಿಯಲ್ಲಿದೆ.

ಇಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಜೂನ್ 26ರಂದು ಚುನಾವಣೆ ನಡೆಯಲಿದ್ದು, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರ ನೇಮಕದ ಗದ್ದಲದ ನಡುವೆಯೇ, ಇಂಡಿಯಾ ಒಕ್ಕೂಟದ ಬ್ಲಾಕ್ ನಾಯಕರು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿರುವ ಸಂಸತ್ತಿನ ಆವರಣದಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದರು. ಕಳೆದ ಅವಧಿಯಲ್ಲಿ ಖಾಲಿ ಉಳಿದಿದ್ದ ಉಪಸಭಾಪತಿ ಸ್ಥಾನವನ್ನು ಸಾಂಪ್ರದಾಯಿಕವಾಗಿ ಪ್ರತಿಪಕ್ಷಗಳಿಗೆ ನೀಡಲಾಗುತ್ತಿದೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಸಂಸದ ಕೆ.ಸುರೇಶ್ ಮಾತನಾಡಿ, ''ಬಿಜೆಪಿಯು ಸ್ವೀಕರ್​ ಸ್ಥಾನಕ್ಕೆ ಒಮ್ಮತಕ್ಕೆ ಬರಲು ಯಾವುದೇ ಉಪಕ್ರಮವನ್ನು ಕೈಗೊಂಡಿಲ್ಲ. ಸಭಾಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು. ಸದನದ ಸಂಪ್ರದಾಯದ ಪ್ರಕಾರ ಸ್ಪೀಕರ್ ಅವಿರೋಧವಾಗಿ ಆಯ್ಕೆಯಾಗುತ್ತಾರೆ. ಬಿಜೆಪಿಯು ಪ್ರತಿಪಕ್ಷಗಳ ಜತೆ ಚರ್ಚೆ ನಡೆಸುತ್ತಿಲ್ಲ. ಒಮ್ಮತಕ್ಕೆ ಮುಂದಾಗಬೇಕು. ಇಲ್ಲಿಯವರೆಗೂ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸ್ಪೀಕರ್ ಸ್ಥಾನಕ್ಕೆ ಒಮ್ಮತಕ್ಕೆ ಬರಲು ಉಪಕ್ರಮವೆಂದರೆ, ಉಪಸಭಾಪತಿ ಸ್ಥಾನ ವಿರೋಧ ಪಕ್ಷಕ್ಕೆ ನೀಡಬೇಕು'' ಎಂದು ಕೆ.ಸುರೇಶ್ ಹೇಳಿದ್ದಾರೆ.

ಇದಕ್ಕೂ ಮುನ್ನ, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿಯ ಲೋಕಸಭಾ ಸಂಸದ ಎನ್‌ಕೆ ಪ್ರೇಮಚಂದ್ರನ್, ಇಂಡಿಯಾ ಒಕ್ಕೂಟ ಲೋಕಸಭೆ ಸ್ಪೀಕರ್ ಮತ್ತು ಡೆಪ್ಯೂಟಿ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ'' ಎಂದು ಹೇಳಿದರು.

ಸ್ಪೀಕರ್ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಬಳಿ ಸಂಖ್ಯಾಬಲ ಇಲ್ಲದ ಕಾರಣ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ಸಂಸದ ಖಗೇನ್ ಮುರ್ಮು ಹೇಳಿದರು.

ಜೂನ್ 26 ರಂದು ಲೋಕಸಭೆಯ ಸ್ಪೀಕರ್ ಆಯ್ಕೆ ನಡೆಯಲಿದೆ. ಜೂನ್ 27 ರಂದು ಅಧ್ಯಕ್ಷ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 543 ಸದಸ್ಯರ ಲೋಕಸಭೆಯಲ್ಲಿ ಎನ್‌ಡಿಎ 293 ಸಂಸದರನ್ನು ಹೊಂದಿದ್ದರೆ, ವಿರೋಧ ಪಕ್ಷವಾದ ಇಂಡಿಯಾ ಒಕ್ಕೂಟಕ್ಕೆ 234 ಸಂಸದರ ಬಲವಿದೆ.

ಇದನ್ನೂ ಓದಿ:ರಾಜ್ಯಸಭೆ ಸಭಾನಾಯಕರಾಗಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ನೇಮಕ - J P Nadda

Last Updated : Jun 25, 2024, 11:34 AM IST

ABOUT THE AUTHOR

...view details