ಕರ್ನಾಟಕ

karnataka

ETV Bharat / bharat

ಮಾಜಿ ಪಿಎಂ ಮನಮೋಹನ್​ ಸಿಂಗ್​ ಬದಲಿಗೆ ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ನಾಮಪತ್ರ - sonia gandhi

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರು ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರ ಬದಲಿಗೆ ರಾಜಸ್ಥಾನದಿಂದ ರಾಜ್ಯಸಭೆಗೆ ಬುಧವಾರ ನಾಮಪತ್ರ ಸಲ್ಲಿಸಿದರು.

rajya sabha elections sonia gandhi will file nomination on wednesday
ಮಾಜಿ ಪಿಎಂ ಮನಮೋಹನ್​ ಸಿಂಗ್​ ಬದಲಿಗೆ ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ನಾಮಪತ್ರ

By ETV Bharat Karnataka Team

Published : Feb 14, 2024, 9:21 AM IST

Updated : Feb 14, 2024, 1:00 PM IST

ಜೈಪುರ (ರಾಜಸ್ಥಾನ) :ಕಾಂಗ್ರೆಸ್​ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನ ಬಯಸಿ ಚುನಾವಣಾಧಿಕಾರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು. ಸಂಸದ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ, ಸಿಎಂ ಅಶೋಕ್​ ಗೆಹ್ಲೋಟ್​ ಈ ವೇಳೆ ಜೊತೆಗಿದ್ದರು.

ಆರೋಗ್ಯ ಕಾರಣದಿಂದಾಗಿ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದು, ರಾಜ್ಯಸಭೆಗೆ ಆಯ್ಕೆ ಬಯಸಿದ್ದಾರೆ. ಉತ್ತರಪ್ರದೇಶದ ರಾಯ್​ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸೋನಿಯಾ ಅವರು ಇದೇ ಮೊದಲ ಬಾರಿಗೆ ಸಂಸತ್ತಿನ ಮೇಲ್ಮನೆಗೆ ಅಡಿ ಇಡಲು ಮುಂದಾಗಿದ್ದಾರೆ. ಹೀಗಾಗಿ ಅವರು ವಸಂತ ಪಂಚಮಿಯ ಶುಭದಿನವಾದ ಇಂದೇ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಿಂದ ಎರಡು ಚಾರ್ಟರ್ ವಿಮಾನಗಳ ಮೂಲಕ ಪುತ್ರ, ಸಂಸದ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆಗೂಡಿ ರಾಜಸ್ಥಾನಕ್ಕೆ ತೆರಳಿದರು. ಬಳಿಕ ಸಿಎಂ ಅಶೋಕ್ ಗೆಹ್ಲೋಟ್​, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್​ ಸಿಂಗ್​ ದೋತಾಸ್ತ ಅವರ ಜೊತೆಗೂ ಚುನಾವಣಾಧಿಕಾರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಇದರ ಬಳಿಕ ಸೋನಿಯಾ ಮತ್ತು ರಾಹುಲ್ ಗಾಂಧಿ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಊಹಾಪೋಹ ಅಂತ್ಯ:ಸೋನಿಯಾ ಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿತ್ತು. ಆದರೆ, ಯಾವ ರಾಜ್ಯದಿಂದ ಅವರು ಆಯ್ಕೆ ಬಯಸಿದ್ದಾರೆ ಎಂಬುದು ಖಚಿತವಾಗಿರಲಿಲ್ಲ. ತೆಲಂಗಾಣ, ಮಧ್ಯಪ್ರದೇಶ, ಕರ್ನಾಟಕ ಕಾಂಗ್ರೆಸ್​ ತಮ್ಮ ರಾಜ್ಯದಿಂದಲೇ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದರು. ಆದರೆ, ಕೊನೆಗೆ ರಾಜಸ್ಥಾನದಿಂದ ಸ್ಪರ್ಧೆ ಮಾಡಿದ್ದಾರೆ.

ಇದರಿಂದ ರಾಜಸ್ಥಾನ ಕಾಂಗ್ರೆಸ್​ನಲ್ಲಿ ಲವಲವಿಕೆ ಹೆಚ್ಚಿದೆ. ಜೊತೆಗೆ ಪಕ್ಷದ ಮಾಜಿ ಅಧ್ಯಕ್ಷೆಯನ್ನು ಆಯ್ಕೆ ಮಾಡಲು ನಾಯಕರು ಸಜ್ಜಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರ ಅವರ ನಿವಾಸಕ್ಕೆ ವಿರೋಧ ಪಕ್ಷದ ನಾಯಕ ಟಿಕಾರಾಂ ಜೂಲಿ ಅವರು ಆಗಮಿಸಿ ಮಾತುಕತೆ ನಡೆಸಿದರು. ಅನೇಕ ಶಾಸಕರು ಕೂಡ ಉಪಸ್ಥಿತರಿದ್ದರು. ಎಲ್ಲರ ನಡುವೆ ಬಹಳ ಹೊತ್ತು ಸಭೆ ಕೂಡ ನಡೆಯಿತು. ಇದಕ್ಕೂ ಮುನ್ನ ಗೋವಿಂದ್ ಸಿಂಗ್ ಅವರು ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದರು.

2 ಬಿಜೆಪಿ, 1 ಕಾಂಗ್ರೆಸ್​:ರಾಜಸ್ಥಾನದಿಂದ ರಾಜ್ಯಸಭೆಗೆ 10 ಮಂದಿ ಆಯ್ಕೆಯಾಗಿದ್ದಾರೆ. ಈ ಪೈಕಿ ಮೂರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಇದರಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (ಕಾಂಗ್ರೆಸ್) ಮತ್ತು ಭೂಪೇಂದ್ರ ಯಾದವ್ (ಬಿಜೆಪಿ) ಅವರ ಅಧಿಕಾರಾವಧಿಯು 3 ಏಪ್ರಿಲ್ 2024 ರಂದು ಕೊನೆಗೊಳ್ಳುತ್ತಿದೆ. ಆದರೆ, ಡಾ.ಕಿರೋದಿಲಾಲ್ ಮೀನಾ (ಬಿಜೆಪಿ) ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ರಾಜ್ಯದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಶಾಸಕರ ಬಲದ ಪ್ರಕಾರ ಮೂರರ ಪೈಕಿ ಎರಡರಲ್ಲಿ ಬಿಜೆಪಿ ಮತ್ತು ಒಂದು ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಖಚಿತ.

ಇದನ್ನೂ ಓದಿ:ಸೋನಿಯಾ ಗಾಂಧಿ ರಾಜ್ಯಸಭೆ ಪ್ರವೇಶ ಸಾಧ್ಯತೆ; 'ಪ್ರಿಯಾಂಕಾ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧೆ'

Last Updated : Feb 14, 2024, 1:00 PM IST

ABOUT THE AUTHOR

...view details