ಕರ್ನಾಟಕ

karnataka

ETV Bharat / bharat

ಮೋದಿ ಶೈಕ್ಷಣಿಕ ಅರ್ಹತೆ ವಿವಾದ: ಕೇಜ್ರಿವಾಲ್‌ಗೆ ನೀಡಿದ್ದ ಸಮನ್ಸ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಪ್ರಧಾನಿ ನರೇಂದ್ರ ಮೋದಿ ಪದವಿ ವಿವಾದ ಹಿನ್ನೆಲೆಯಲ್ಲಿ ಅರವಿಂದ ಕೇಜ್ರಿವಾಲ್‌ಗೆ ನೀಡಿದ್ದ ಸಮನ್ಸ್ ಆದೇಶವನ್ನು ಸುಪ್ರೀಂ ಕೋರ್ಟ್​ ಇಂದು ಎತ್ತಿ ಹಿಡಿಯಿತು.

PM MODI DEGREE ROW
ಕೇಜ್ರಿವಾಲ್‌ಗೆ ನೀಡಿದ್ದ ಸಮನ್ಸ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ (ETV Bharat)

By PTI

Published : 11 hours ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ವಿರುದ್ಧ ನೀಡಲಾದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿರುವ ಗುಜರಾತ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಇದೇ ಪ್ರಕರಣದಲ್ಲಿ ಎಎಪಿ ನಾಯಕ ಸಂಜಯ್ ಸಿಂಗ್ ಸಲ್ಲಿಸಿದ್ದ ಮನವಿಯನ್ನೂ ಸುಪ್ರೀಂ ನ್ಯಾಯಮೂರ್ತಿಗಳಾದ ಋಷಿಕೇಶ್ ರಾಯ್ ಮತ್ತು ಎಸ್‌.ವಿ.ಎನ್.ಭಟ್ಟಿ ಅವರಿದ್ದ ಪ್ರತ್ಯೇಕ ಪೀಠ ರದ್ದುಗೊಳಿಸಿತು.

"ಗುಜರಾತ್ ಹೈಕೋರ್ಟ್‌ ಅರ್ಜಿ ವಜಾಗೊಳಿಸಿದ್ದರಿಂದ ನಾವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ" ಎಂದು ಮೇಲ್ಮನವಿ ತಿರಸ್ಕರಿಸುವ ಸಂದರ್ಭದಲ್ಲಿ ನ್ಯಾಯಾಲಯ ಹೇಳಿದೆ.

ಪ್ರಧಾನಿ ಮೋದಿಯವರ ಶೈಕ್ಷಣಿಕ ಪದವಿಗಳ ಕುರಿತು ಟೀಕೆಗಳಿಗೆ ಸಂಬಂಧಿಸಿದಂತೆ ಗುಜರಾತ್ ವಿವಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಅರವಿಂದ ಕೇಜ್ರಿವಾಲ್‌ಗೆ ಹೊರಡಿಸಿದ್ದ ಸಮನ್ಸ್ ಅನ್ನು ರದ್ದುಗೊಳಿಸಲು ಗುಜರಾತ್ ಉಚ್ಚ ನ್ಯಾಯಾಲಯ ಫೆಬ್ರವರಿ 16ರಂದು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ:ಭಾರತ ವಿಶ್ವಕ್ಕೆ ಭರವಸೆಯ ಕಿರಣ: ಪ್ರಧಾನಿ ಮೋದಿ

ABOUT THE AUTHOR

...view details