ರಿಷಿಕೇಶ (ಉತ್ತರಾಖಂಡ್): ದೇಶದ ಪ್ರಮುಖ ಉದ್ಯಮಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಶುಕ್ರವಾರ ಸಂಜೆ ರಿಷಿಕೇಶ ತಲುಪಿದ್ದಾರೆ. ತ್ರಿವೇಣಿ ಘಾಟ್‌ನಲ್ಲಿ ಗಂಗಾ ಆರತಿ ನೆರವೇರಿಸಿದ ಅವರು, ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಒಳ್ಳೆದಾಗ್ಲಿ ಎಂದು ಆ ದೇವರ ಬಳಿ ಕೇಳಿಕೊಂಡರು. ರಾಹುಲ್ ಮತ್ತು ಪ್ರಿಯಾಂಕಾ ಅವರು ಇಡೀ ದೇಶದಲ್ಲಿ ರಾಜಕೀಯ ಮಾಡುತ್ತಿರುವ ಉದ್ದೇಶ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ದೇಶವು ನಾನು ರಾಜಕೀಯಕ್ಕೆ ಬರಬೇಕು ಎಂದು ಬಯಸುತ್ತದೆ ಎಂದು ಹೇಳಿದರು.
ಗಮನ ಸೆಳೆದ ಗಂಗಾ ಆರತಿ:ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಗಮನ ಸೆಳೆದಿದ್ದ ರಾಬರ್ಟ್ ವಾದ್ರಾ ಅವರು ಋಷಿಕೇಶ ತ್ರಿವೇಣಿ ಘಾಟ್‌ನಲ್ಲಿ ಗಂಗಾ ಮಾತೆಯ ಧಾರ್ಮಿಕ ಪೂಜೆಯನ್ನು ನೆರವೇರಿಸಿದರು ಮತ್ತು ಗಂಗಾ ಆರತಿಯಲ್ಲಿ ಪಾಲ್ಗೊಂಡರು. ಗಾಂಧಿ ಕುಟುಂಬದ ಮೇಲೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಡೆಸುತ್ತಿರುವ ದಾಳಿಯೇ ಅವರ ಭಯ ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ. ಈ ಜನರು ನಿಜವಾದ ಸಮಸ್ಯೆಗಳಿಂದ ದೇಶದ ಗಮನವನ್ನು ಬೇರೆಡೆಗೆ ತಿರುಗಿಸಲು ಬಯಸುತ್ತಾರೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ದೇಶದ ನೈಜ ಸಮಸ್ಯೆಗಳನ್ನು ದೇಶದ ಮುಂದೆ ಪ್ರಸ್ತಾಪಿಸುತ್ತಿದ್ದಾರೆ ಮತ್ತು ಅವುಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ ಎಂಬ ಕಾರಣಕ್ಕಾಗಿ ಪ್ರಧಾನಿ ಗಾಂಧಿ ಕುಟುಂಬದ ವಿರುದ್ಧವೂ ದಾಳಿ ಮಾಡುತ್ತಿದ್ದಾರೆ.
ಪ್ರಧಾನಿ ಮತ್ತು ಬಿಜೆಪಿ ನಾಯಕರು ಚುನಾವಣೆಯಲ್ಲಿ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಸಾರ್ವಜನಿಕರಲ್ಲಿ ಭಯ, ಆತಂಕ ಮೂಡಿದೆ. ಈ ಜನರು ದೇಶದೊಳಗೆ ತಾರತಮ್ಯದ ರಾಜಕಾರಣ ಮಾಡುತ್ತಿದ್ದಾರೆ ಎಂದು ರಾಬರ್ಟ್ ವಾದ್ರಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.