ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ನೇಮಕಗೊಂಡವರಿಗೆ 71,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿಗಳ ಬದ್ಧತೆ ಈಡೇರಿಸುವ ಬಗ್ಗೆ ರೋಜಗಾರ್ ಮೇಳದ ಸಂದರ್ಭದಲ್ಲಿಅವರು ಮಾತನಾಡಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.
ಇದು ಯುವಜನರಿಗೆ ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣದಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ಪಿಎಂಒ ಹೊರಡಿಸಿರುವ ಹೇಳಿಕೆಯಲ್ಲಿ ಸೇರಿಸಲಾಗಿದೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇಮಕಾತಿಗಳು ನಡೆಯುತ್ತಿವೆ.
ದೇಶಾದ್ಯಂತ ಆಯ್ಕೆಯಾದವರು, ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಮತ್ತು ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಿಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಲಿದ್ದಾರೆ. ಈ ತಿಂಗಳ ಆರಂಭದಲ್ಲಿ, ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ, ಖಾಲಿ ಹುದ್ದೆಗಳ ಭರ್ತಿ ನಿರಂತರ ಪ್ರಕ್ರಿಯೆಯಾಗಿದ್ದು, ಮತ್ತು ಖಾಲಿ ಹುದ್ದೆಗಳ ವಿವರಗಳನ್ನು ಆಯಾ ಸಚಿವಾಲಯಗಳು ಅಥವಾ ಇಲಾಖೆಗಳು ಕಾಲಕಾಲಕ್ಕೆ ನೀಡುತ್ತಿರುತ್ತವೆ ಎಂದು ತಿಳಿಸಿದೆ.