ಕರ್ನಾಟಕ

karnataka

ETV Bharat / bharat

ಭಾರತದ 51ನೇ ಸಿಜೆಐ ಆಗಿ ಸಂಜೀವ ಖನ್ನಾ ಇಂದು ಪ್ರಮಾಣ ವಚನ - JUSTICE SANJIV KHANNA

ಭಾರತದ ಮುಂದಿನ ಸಿಜೆಐ ಆಗಿ ಸಂಜೀವ್ ಖನ್ನಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ
ನ್ಯಾಯಮೂರ್ತಿ ಸಂಜೀವ್ ಖನ್ನಾ (IANS)

By ETV Bharat Karnataka Team

Published : Nov 10, 2024, 4:27 PM IST

Updated : Nov 11, 2024, 8:31 AM IST

ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧನೆ ಮಾಡಲಿದ್ದಾರೆ. ನ್ಯಾ.ಖನ್ನಾ 51ನೇ ಸಿಜೆಐ ಆಗಲಿದ್ದು, ಸುಮಾರು 6 ತಿಂಗಳ ಅಧಿಕಾರಾವಧಿ ಹೊಂದಿರುತ್ತಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಅವರು 370ನೇ ವಿಧಿ, ವ್ಯಭಿಚಾರವನ್ನು ಅಪರಾಧಮುಕ್ತಗೊಳಿಸುವುದು, ಚುನಾವಣಾ ಬಾಂಡ್ ಯೋಜನೆ, ಇವಿಎಂ-ವಿವಿಪ್ಯಾಟ್ ಎಣಿಕೆ ಇತ್ಯಾದಿ ಪ್ರಕರಣಗಳ ಐತಿಹಾಸಿಕ ತೀರ್ಪುಗಳ ಭಾಗವಾಗಿದ್ದಾರೆ.

ನ್ಯಾ.ಡಿ.ವೈ.ಚಂದ್ರಚೂಡ್ ಅವರು ಕಳೆದ ತಿಂಗಳು ನ್ಯಾಯಮೂರ್ತಿ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ ನಂತರ ಅಕ್ಟೋಬರ್ 24ರಂದು ಕೇಂದ್ರವು ನ್ಯಾಯಮೂರ್ತಿ ಖನ್ನಾ ಅವರನ್ನು ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ನೇಮಕ ಮಾಡಲು ಅನುಮೋದನೆ ನೀಡಿತು.

"ಭಾರತದ ಸಂವಿಧಾನದ 124ನೇ ವಿಧಿಯ ಕಲಂ (2) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, ರಾಷ್ಟ್ರಪತಿಯವರು ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು 2024ರ ನವೆಂಬರ್ 11ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ" ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಅವರು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದಾರೆ ಮತ್ತು ಭೋಪಾಲ್​ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ.

ಖನ್ನಾ 2019ರ ಜನವರಿವರೆಗೆ ದೆಹಲಿ ಹೈಕೋರ್ಟ್​ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ದೆಹಲಿ ಹೈಕೋರ್ಟ್​ನ ನ್ಯಾಯಾಧೀಶರಾಗಿ, ಅವರು ದೆಹಲಿ ನ್ಯಾಯಾಂಗ ಅಕಾಡೆಮಿ, ದೆಹಲಿ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಮತ್ತು ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರಗಳ ಅಧ್ಯಕ್ಷ / ಉಸ್ತುವಾರಿ ನ್ಯಾಯಾಧೀಶರ ಜವಾಬ್ದಾರಿಗಳನ್ನು ಹೊಂದಿದ್ದರು.

ಮೇ 1960ರಲ್ಲಿ ಜನಿಸಿದ ಅವರು ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್ ನಿಂದ ಕಾನೂನು ಪದವಿ ಪಡೆದರು. ಅವರು 1983ರಲ್ಲಿ ದೆಹಲಿಯ ಬಾರ್ ಕೌನ್ಸಿಲ್​ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು ಮತ್ತು ಆರಂಭದಲ್ಲಿ ದೆಹಲಿ ಹೈಕೋರ್ಟ್​ನಲ್ಲಿ ತೆರಿಗೆ, ಮಧ್ಯಸ್ಥಿಕೆ, ವಾಣಿಜ್ಯ ಕಾನೂನು, ಪರಿಸರ ಕಾನೂನು, ವೈದ್ಯಕೀಯ ನಿರ್ಲಕ್ಷ್ಯ ಕಾನೂನು ಮತ್ತು ಕಂಪನಿ ಕಾನೂನುಗಳ ವಿಷಯದಲ್ಲಿ ವಕೀಲಿಕೆ ಮಾಡಿದರು.

ಅವರು ದೀರ್ಘಾವಧಿಯವರೆಗೆ ಆದಾಯ ತೆರಿಗೆ ಇಲಾಖೆಯ ಹಿರಿಯ ಸ್ಥಾಯಿ ಸಲಹೆಗಾರರಾಗಿದ್ದರು. 2004 ರಲ್ಲಿ ದೆಹಲಿ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ (ಸಿವಿಲ್) ನೇಮಕಗೊಂಡರು. ಅವರು ದೆಹಲಿ ಹೈಕೋರ್ಟ್​ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಅಮಿಕಸ್ ಕ್ಯೂರಿಯಾಗಿ (ನ್ಯಾಯಾಲಯದ ಸ್ನೇಹಿತ) ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಹಾಜರಾಗಿದ್ದರು ಮತ್ತು ವಾದಿಸಿದ್ದರು.

ಇದನ್ನೂ ಓದಿ : 25 ಸಾವಿರ ಫಾಜಿಲ್, ಕಾಮಿಲ್ ಮದರಸಾ ಪದವೀಧರರು ಅತಂತ್ರ: ಮಾನ್ಯತೆ ಪಡೆದ ವಿವಿಯಲ್ಲಿ ಪ್ರವೇಶಕ್ಕೆ ಒತ್ತಾಯ

Last Updated : Nov 11, 2024, 8:31 AM IST

ABOUT THE AUTHOR

...view details