ಕರ್ನಾಟಕ

karnataka

ETV Bharat / bharat

ಛತ್ತೀಸ್​ಗಢದಲ್ಲಿ ಭದ್ರತಾ ಪಡೆಗಳ ಬಿಗ್​​​​​​​​​​​​ ಎನ್​ಕೌಂಟರ್: 10 ಮಂದಿ ಮಾವೋವಾದಿಗಳು ಹತ - 10 NAXALITES KILLED

ಭದ್ರತಾ ಪಡೆಗಳ ಎನ್​ಕೌಂಟರ್​ಗೆ 10 ಮಂದಿ ನಕ್ಸಲೀಯರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ANI)

By PTI

Published : Nov 22, 2024, 3:53 PM IST

Updated : Nov 22, 2024, 4:03 PM IST

ಸುಕ್ಮಾ( ಛತ್ತೀಸ್‌ಗಢ):ಸುಕ್ಮಾಜಿಲ್ಲೆಯಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ 10 ಮಂದಿ ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್​ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಭೆಜ್ಜಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಬೆಳಗ್ಗೆ ಗುಂಡಿನ ಚಕಮಕಿ ನಡೆಯಿತು. ಕೊರಜಗುಡ, ದಾಂತಪುರಂ, ನಗರಂ ಮತ್ತು ಭಾಂಡರ್​ಪದರ್ ಗ್ರಾಮಗಳ ಅರಣ್ಯದಲ್ಲಿ ಕೊಂಟಾ ಮತ್ತು ಕಿಸ್ತಾರಾಮ್​ ಪ್ರದೇಶ ಸಮಿತಿಗಳಿಗೆ ಸೇರಿದ ಮಾವೋವಾದಿಗಳು ಇರುವ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಲಾಯಿತು. ಘಟನಾ ಸ್ಥಳದಿಂದ ಈವರೆಗೆ 10 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ. ತಿಳಿಸಿದ್ದಾರೆ.

"ಘಟನಾ ಸ್ಥಳದಿಂದ ಐಎನ್ಎಸ್ಎಎಸ್ ರೈಫಲ್, ಎಕೆ -47 ರೈಫಲ್ ಮತ್ತು ಸೆಲ್ಫ್ ಲೋಡಿಂಗ್ ರೈಫಲ್ (ಎಸ್ಎಲ್ಆರ್) ಸೇರಿದಂತೆ ಇತರ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್​ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್​ಪಿಎಫ್​) ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಿವೆ" ಎಂದು ಮಾಹಿತಿ ನೀಡಿದರು.

ಛತ್ತೀಸ್​ಗಢದಲ್ಲಿ ನಕ್ಸಲರ ನಿರ್ಮೂಲನೆ ಖಚಿತ:ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಭದ್ರತಾ ಪಡೆಗಳನ್ನು ಶ್ಲಾಘಿಸಿದರು. "ಇಂದು ಬೆಳಗ್ಗೆ ಸುಕ್ಮಾ ಜಿಲ್ಲೆಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 10 ನಕ್ಸಲೀಯರನ್ನು ಹೊಡೆದುರುಳಿಸಿವೆ. ರಾಜ್ಯ ಸರ್ಕಾರ ನಕ್ಸಲಿಸಂ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅನುಸರಿಸುತ್ತಿದೆ. ಬಸ್ತಾರ್‌ನಲ್ಲಿ ಅಭಿವೃದ್ಧಿ, ಶಾಂತಿ ಮತ್ತು ನಾಗರಿಕರ ಸುರಕ್ಷತೆ ಖಚಿತಪಡಿಸುವುದು ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಶಾಂತಿ, ಅಭಿವೃದ್ಧಿ ಮತ್ತು ಪ್ರಗತಿಯ ಯುಗವು ಬಸ್ತಾರ್​ಗೆ ಮರಳಿದೆ. ಛತ್ತೀಸ್​ಗಢದಲ್ಲಿ ನಕ್ಸಲರನ್ನು ನಿರ್ಮೂಲನೆ ಮಾಡುವುದು ಖಚಿತ" ಎಂದರು.

"ಮಾರ್ಚ್ 2026ರೊಳಗೆ ಛತ್ತೀಸ್​ಗಢದಲ್ಲಿ ನಕ್ಸಲರನ್ನು ನಿರ್ಮೂಲನೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿಗದಿಪಡಿಸಿದ ಗುರಿಯನ್ನು ತಲುಪುವ ನಿಟ್ಟಿನಲ್ಲಿ ನಾವು ಯೋಜಿತ ರೀತಿಯಲ್ಲಿ ಮುಂದುವರಿಯುತ್ತಿದ್ದೇವೆ" ಎಂದು ಹೇಳಿದರು.

ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡ ಬಸ್ತಾರ್ ಪ್ರದೇಶದಲ್ಲಿ ಪ್ರತ್ಯೇಕ ಎನ್​ಕೌಂಟರ್​ಗಳ ನಂತರ ಈ ವರ್ಷ ಇಲ್ಲಿಯವರೆಗೆ 207 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಎನ್‌ಕೌಂಟರ್‌ : ಓರ್ವ ನಕ್ಸಲ್ ಹತ, ಭದ್ರತಾ ಸಿಬ್ಬಂದಿಗೆ ಗಾಯ

Last Updated : Nov 22, 2024, 4:03 PM IST

ABOUT THE AUTHOR

...view details