ನೆಲ್ಲೂರು, ಆಂಧ್ರಪ್ರದೇಶ:ಜಿಲ್ಲೆಯ ಕವಲಿಯ ಮುಸುನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಏಳು ಜನ ಸಾವು: ಪೊಲೀಸರು ಮತ್ತು ಗಾಯಾಳುಗಳ ಪ್ರಕಾರ, ಚೆನ್ನೈನಿಂದ ಖಾಸಗಿ ಬಸ್ ಹೈದರಾಬಾದ್ಗೆ ಬರುತ್ತಿತ್ತು. ಇಂದು ನಸುಕಿನ ಜಾವ ನೆಲ್ಲೂರು ಬಳಿ ಮೊದಲು ಟ್ರಕ್ವೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ,ಎದುರಿನಿಂದ ಬರುತ್ತಿದ್ದ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ನಲ್ಲಿದ್ದ ಚಾಲಕ ಸಮೇತ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭರದಿಂದ ಸಾಗಿದ ರಕ್ಷಣಾ ಕಾರ್ಯಾ: ಇನ್ನು ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಹೈವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ: ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಮೃತರ ಪತ್ತೆಯ ಕಾರ್ಯ ಬಳಿಕ ಆಯಾ ಕುಟುಂಬಸ್ಥರಿಗೆ ಮಾಹಿತಿ ರವಾನಿಸುವ ಕಾರ್ಯ ಸಾಗಿದೆ. ಸದ್ಯ ಅಪಘಾತದ ಸ್ಥಳದಲ್ಲಿ ಅಪಘಾತಕ್ಕೀಡಾದ ವಾಹನಗಳನ್ನು ಪೊಲೀಸರು ಕ್ರೇನ್ ಮೂಲಕ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ಸಾರಿಗೆ ಸಂಚಾರ ಸುಗಮಗೊಳಿಸುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಓದಿ:ಕೇರಳದಲ್ಲಿ ಆತ್ಮಾಹುತಿ ದಾಳಿಗೆ ಸಂಚು; ರಿಯಾಜ್ ಅಬೂಬಕರ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ