ಕರ್ನಾಟಕ

karnataka

ETV Bharat / bharat

ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ: 6 ಮಂದಿ ಕಾರ್ಮಿಕರು ದಾರುಣ ಸಾವು - FIRECRACKERS UNIT BLAST

ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಹಲವಾರು ಕಾರ್ಮಿಕರು ಸಾವಿಗೀಡಾಗಿದ್ದಾರೆ.

ಸಾಂದರ್ಭಿಕ ಫೋಟೊ
ಸಾಂದರ್ಭಿಕ ಫೋಟೊ (ETV Bharat)

By PTI

Published : Jan 4, 2025, 12:30 PM IST

ವಿರುದುನಗರ (ತಮಿಳುನಾಡು) :ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಿರುದನಗರ ಸಮೀಪದ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಟಾಕಿ ತಯಾರಿಕೆ ವೇಳೆ ರಾಸಾಯನಿಕ ಬೆರೆಸುವ ಪ್ರಕ್ರಿಯೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇದರಿಂದ ಕಾರ್ಖಾನೆಯ ಒಂದು ಕೊಠಡಿ ಧ್ವಂಸವಾಗಿದೆ. ಬೆಂಕಿ ಹೊತ್ತಿಕೊಂಡ ಕಾರಣ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ.

ABOUT THE AUTHOR

...view details