ನವದೆಹಲಿ:ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆಯಾದ (ಡಿಬಿಟಿ) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11.8 ಕೋಟಿ ರೈತರು ಲಾಭ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ದೇಶದ ರೈತರಿಗೆ ಬೆಳೆ ಬೆಳೆಯಲು ಅನುಕೂಲವಾಗಲಿ ಎಂದು ಸರ್ಕಾರ ಈ ಆರ್ಥಿಕ ನೆರವು ನೀಡುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಗುರುವಾರ ಹೇಳಿದರು.
ಪಿಎಂ ಕಿಸಾನ್ ಸಮ್ಮಾನ್ ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ. ಕಳೆದ ಬಾರಿಗಿಂತಲೂ ಅಧಿಕ ರೈತರು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಯೋಜನೆಯಡಿ ದೇಶದ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ವರ್ಷದಲ್ಲಿ ಮೂರು ಕಂತುಗಳಲ್ಲಿ 2 ಸಾವಿರದಂತೆ ಒಟ್ಟು 6 ಸಾವಿರ ರೂಪಾಯಿಯನ್ನು ಸರ್ಕಾರ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ವರ್ಗಾಯಿಸುತ್ತಿದೆ. 2019 ರ ಫೆಬ್ರವರಿಯಲ್ಲಿ ಮಂಡಿಸಲಾದ ಮಧ್ಯಂತರ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಲಾಗಿತ್ತು. ಡಿಸೆಂಬರ್ 2018 ರಿಂದಲೇ ಪೂರ್ವಾನ್ವಯವಾಗುವಂತೆ ಯೋಜನೆಯನ್ನು ಜಾರಿಗೆ ತರಲಾಯಿತು.