ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಪ್ರಸ್ತಾಪಿಸಿದ ಸಾಧಕರು ಮತ್ತು ತೆರೆಮರೆಯ ಸಾಧಕರು ಭಾನುವಾರ ಇಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ್ದರು.
ಕರ್ತವ್ಯ ಪಥದಲ್ಲಿ ನಡೆದ ದೇಶದ ಸಾಂಸ್ಕೃತಿಕತೆಯನ್ನು ಬಿಂಬಿಸುವ ಮೆರವಣಿಗೆಯ ಕಾರ್ಯಕ್ರಮದಲ್ಲಿ ಸುಮಾರು 400 ಮಂದಿ ಪಾಲ್ಗೊಂಡಿದ್ದರು. ಎಲ್ಲ ಸಾಧಕರನ್ನು ಸರ್ಕಾರವು ಗಣರಾಜ್ಯೋತ್ಸವ ಕಾಯಕ್ರಮಕ್ಕೆ ಆಹ್ವಾನ ನೀಡಿತ್ತು.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು, ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಲಾದ ಗಣ್ಯರು ಗಣರಾಜ್ಯೋತ್ಸವ ದಿನದ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ವಿಶೇಷ ಅತಿಥಿಗಳಿಗೆ ಆಕಾಶವಾಣಿ ಭವನದಲ್ಲಿ ಊಟದ ಆತಿಥ್ಯ ನೀಡಲಾಯಿತು. ಮನ್ ಕಿ ಬಾತ್ ಮೂಲಕ ದೇಶಾದ್ಯಂತ ನಡೆಯುತ್ತಿರುವ ಉತ್ತಮ ಕಾರ್ಯಗಳು ಜಾಗತಿಕ ವೇದಿಕೆಗೆ ತಲುಪಿವೆ ಎಂದು ಹೇಳಿದರು.