ಸೂರತ್ (ಗುಜರಾತ್):ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಹಿನ್ನೆಲೆ ಸೂರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯದ ಬಿಜೆಪಿ ಮುಖ್ಯಸ್ಥ ಸಿ. ಆರ್. ಪಾಟೀಲ್ ತಿಳಿಸಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ಸೂರತ್‌ನಿಂದ ಮೊದಲ ಜಯವನ್ನು ಅರ್ಪಿಸಿದೆ. ಸೂರತ್ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ" ಎಂದು ಪಾಟೀಲ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.