ನೈಋತ್ಯ ಮಾನ್ಸೂನ್ ಹಿಮ್ಮೆಟ್ಟುತ್ತಿರುವಾಗ, ಈಶಾನ್ಯ ಮಾನ್ಸೂನ್ ಪ್ರಭಾವ ಹೆಚ್ಚಾಗಿ ಗೋಚರಿಸುತ್ತದೆ. ಈ ಸಮಯದಲ್ಲಿ ಸಮುದ್ರದ ಉಷ್ಣತೆ ಹೆಚ್ಚಿರುವುದರಿಂದ ಪ್ರತಿ ವರ್ಷ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಕಡಿಮೆ ಒತ್ತಡಗಳು ಕ್ರಮೇಣ ವಾಯು ಪಾಕೆಟ್ಸ್ ಮತ್ತು ಚಂಡಮಾರುತಗಳಾಗಿ ಪರಿವರ್ತನೆಗೊಳ್ಳುತ್ತವೆ. ಈ ಪರಿಸ್ಥಿತಿಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ದಶಕದಲ್ಲಿ, ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ ಬಂಗಾಳ ಕೊಲ್ಲಿಯಲ್ಲಿ 11 ಚಂಡಮಾರುತಗಳು ರೂಪುಗೊಂಡಿವೆ, ಅದರಲ್ಲಿ 6 ಚಂಡಮಾರುತಗಳು ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಪಾರ ಹಾನಿಯನ್ನುಂಟು ಮಾಡಿದ್ದವು.
ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ತೀವ್ರ ಕಡಿಮೆ ಒತ್ತಡ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಪರಿಚಲನೆಯಾಗಿ ಬಲಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಐಎಂಡಿ ಬಹಿರಂಗಪಡಿಸಿದೆ. ಈ ಹಿನ್ನೆಲೆಯಲ್ಲಿ ಮಳೆ ಮತ್ತು ಗಾಳಿಯ ತೀವ್ರತೆ ಆಧರಿಸಿ ಹವಾಮಾನ ಇಲಾಖೆ ಆಗಾಗ್ಗೆ ಎಚ್ಚರಿಕೆಗಳನ್ನು ರವಾನಿಸುತ್ತದೆ. ಮಳೆಯ ತೀವ್ರತೆ ಮತ್ತು ಗಾಳಿಯ ವೇಗವನ್ನು ಆಧರಿಸಿ, IMD ಹಸಿರು, ಹಳದಿ, ಕಿತ್ತಳೆ ಮತ್ತು ಕೆಂಪು ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ಕಾಲಕಾಲಕ್ಕೆ ಸರ್ಕಾರಗಳನ್ನು ಈ ಮೂಲಕ ಎಚ್ಚರಿಸಲಾಗುತ್ತದೆ.
ಇದನ್ನು ಓದಿ:ತೀವ್ರ ಸ್ವರೂಪ ಪಡೆಯುತ್ತಿರುವ ಚಂಡಮಾರುತಗಳು: ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಹಸಿರು ಎಚ್ಚರಿಕೆ Green Alert :24 ಗಂಟೆಗಳ ಅವಧಿಯಲ್ಲಿ ಯಾವುದೇ ಪ್ರದೇಶದಲ್ಲಿ 6.4 ಸೆಂ.ಮೀಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದ್ದರೆ ಹವಾಮಾನ ಇಲಾಖೆ ಅಧಿಕಾರಿಗಳು ಈ ಎಚ್ಚರಿಕೆಯನ್ನು ನೀಡುತ್ತಾರೆ. ಈ ಎಚ್ಚರಿಕೆಯು ಹವಾಮಾನದಲ್ಲಿ ಮುಂಬರುವ ಬದಲಾವಣೆಗಳ ಬಗ್ಗೆ ನಮಗೆ ತಿಳಿಸುತ್ತದೆ. ಆದರೆ, ಕಡಿಮೆ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಈ ಎಚ್ಚರಿಕೆಯ ಮೂಲಕ ವಿಶೇಷ ಎಚ್ಚರಿಕೆ ನೀಡುವ ಅಗತ್ಯ ಇರುವುದಿಲ್ಲ.
ಹಳದಿ ಎಚ್ಚರಿಕೆ - Yellow Alert:ಒಂದು ಸ್ಥಳದಲ್ಲಿ 6.45 ಸೆಂ.ಮೀ ನಿಂದ 11.55 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಮತ್ತು ಅಂದಾಜಿನ ಆಧಾರದ ಮೇಲೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆಯನ್ನು ನೀಡುತ್ತದೆ. ಈ ಎಚ್ಚರಿಕೆಯನ್ನು ನೀಡಲಾಗಿದೆ ಅಂದರೆ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಬದಲಾಗುತ್ತವೆ ಎಂದೇ ಅರ್ಥ. ಸುಮಾರು 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇರುತ್ತದೆ. ಹಠಾತ್ ಪ್ರವಾಹದ ಅಪಾಯವಿರುವುದರಿಂದ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ. ಇದು ಮುಂಬರುವ ಭಾರಿ ಅಪಾಯಗಳಿಂದ ನಮ್ಮನ್ನು ರಕ್ಷಿಸುವ ಉದ್ದೇಶ ಹೊಂದಿರುತ್ತದೆ.
ಇದನ್ನು ಓದಿ:ಧಾರವಾಡದಲ್ಲಿ ನಿರಂತರ ಮಳೆಗೆ ಕೊಚ್ಚಿ ಹೋದ ಸೇತುವೆ: ಹಗ್ಗವೇ ಜನರಿಗಿಲ್ಲಿ ಆಸರೆ