ತಿರುಚ್ಚಿ, ತಮಿಳುನಾಡು: ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರರೋಧ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಅಂತಾರಾಷ್ಟ್ರೀಯ ಸ್ಕೌಟ್ ಮತ್ತು ಗೈಡ್ ಕಾರ್ಯಕ್ರಮದ ವಜ್ರ ಮಹೋತ್ಸವದಲ್ಲಿ ಮಾತನಾಡಿದ ಅವರು, ಭಾರತವೂ ವೈವಿಧ್ಯತೆಯಿಂದ ಕೂಡಿರುವ ದೇಶವಾಗಿದ್ದು, ಇಡೀ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದು ಅಸಾಧ್ಯವಾಗಿದೆ ಎಂದಿದ್ದಾರೆ.
ಇತ್ತೀಚಿಗಷ್ಟೇ ಉತ್ತರಾಖಂಡ್ ಸರ್ಕಾರ ಈ ಏಕರೂಪ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡಿದೆ. ತಮಿಳುನಾಡಿನಲ್ಲಿ ಅಂತಾರಾಷ್ಟ್ರೀಯ ಸ್ಕೌಟ್ ಮತ್ತು ಗೈಡ್ ಕಾರ್ಯಕ್ರಮದ ವಜ್ರ ಮಹೋತ್ಸವದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಆಯೋಜಿಸಿದ್ದಕ್ಕೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರಿಗೆ ಧನ್ಯವಾದವನ್ನು ಅರ್ಪಿಸಿದರು. ಇಷ್ಟು ದೊಡ್ಡ ಕಾರ್ಯಕ್ರಮ ಆಯೋಜಿಸುವುದು ಸಾಮಾನ್ಯ ಸಂಗತಿಯಲ್ಲ. ತಮಿಳುನಾಡು ಸರ್ಕಾರ ಈ ಧೈರ್ಯವೂ ಶ್ಲಾಘನಾರ್ಹ. ನಾನು ಕೂಡ ಬಾಲ್ಯದಲ್ಲಿ ಸ್ಕೌಟ್ ಸದಸ್ಯನಾಗಿದ್ದೆ. ಇದೇ ಕಾರಣ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದಕ್ಕೆ ನನಗೆ ಸಂತಸವಾಗುತ್ತಿದೆ. ಈ ಕಾರ್ಯಕ್ರಮ ಸ್ಕೌಟ್ ವಿದ್ಯಾರ್ಥಿಗಳಿಗೆ ಹೊಸ ಉತ್ಸಾಹ ತರುತ್ತಿದೆ ಎಂದರು.
ತಿರುಚ್ಚಿಯಲ್ಲಿ ಜನವರಿ 28ರಿಂದ ಫೆಬ್ರವರಿ 3ರವರೆಗೆ ಭಾರತ್ ಶರಣ ಶರಣಿಯಾರ್ ಯಯಕ್ ವಜ್ರ ಮಹೋತ್ಸವ ಮತ್ತು ಕಲೈಗ್ನರ್ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.