ನವದೆಹಲಿ:ಕೇಂದ್ರ ಗೃಹ ಸಚಿವಾಲಯ ಸೇರಿದಂತೆ ಹಲವು ಸಚಿವಾಲಯಗಳನ್ನು ಹೊಂದಿರುವ ನಾರ್ತ್ ಬ್ಲಾಕ್ಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಬಂದಿದೆ. ತಕ್ಷಣವೇ ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ, ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನ ನಾರ್ತ್ ಬ್ಲಾಕ್ಗೆ ಬಾಂಬ್ ಬೆದರಿಕೆ ಬಗ್ಗೆ ಇಮೇಲ್ ಸಂದೇಶ ಬಂದಿದೆ. ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ 3:37ಕ್ಕೆ ಪೊಲೀಸರಿಂದ ಕರೆ ಸ್ವೀಕರಿಸಲಾಗಿದೆ. ಇದರಿಂದ ಎರಡು ಅಗ್ನಿಶಾಮಕ ದಳದ ವಾಹನಗಳು ಹಾಗೂ ಶ್ವಾನ ದಳದೊಂದಿಗೆ ಬಾಂಬ್ ನಿಷ್ಕ್ರಿಯ ದಳದ ತಂಡವು ಸ್ಥಳಕ್ಕೆ ಧಾವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.