ನವದೆಹಲಿ:ಇಲ್ಲಿನ ಹಳೆ ರಾಜಿಂದರ್ ನಗರದಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಗೆ ಕಳೆದ ರಾತ್ರಿ ಮಳೆ ನೀರು ನುಗ್ಗಿ, ಇಬ್ಬರು ಹುಡುಗಿಯರು ಮತ್ತು ಓರ್ವ ಹುಡುಗ ಸೇರಿದಂತೆ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತದೇಹವನ್ನು ಹೊರತೆಗೆಯಲಾಗಿದೆ. ಇನ್ನೂ ಕೆಲವರು ಸಿಲುಕಿರುವ ಶಂಖೆ ಇದ್ದು ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ದೆಹಲಿ: IAS ಕೋಚಿಂಗ್ ಕೇಂದ್ರದ ನೆಲಮಾಳಿಗೆಗೆ ನುಗ್ಗಿದ ನೀರು; ಮೂವರು ವಿದ್ಯಾರ್ಥಿಗಳು ಸಾವು - Coaching Centre Flooded - COACHING CENTRE FLOODED
ದೆಹಲಿಯಲ್ಲಿ ಶನಿವಾರ ರಾತ್ರಿ ಭಾರೀ ಅವಘಡ ಸಂಭವಿಸಿತು. ರಾಜಿಂದರ್ ನಗರದಲ್ಲಿರುವ ರಾವ್ಸ್ IAS ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಗೆ ದಿಢೀರ್ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಕೆಲವು ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
![ದೆಹಲಿ: IAS ಕೋಚಿಂಗ್ ಕೇಂದ್ರದ ನೆಲಮಾಳಿಗೆಗೆ ನುಗ್ಗಿದ ನೀರು; ಮೂವರು ವಿದ್ಯಾರ್ಥಿಗಳು ಸಾವು - Coaching Centre Flooded UPSCE STUDENT DEATH DELHI BIG NEWS WATERLOGGING IN DELHI RAJINDER NAGAR INCIDENT COACHING](https://etvbharatimages.akamaized.net/etvbharat/prod-images/28-07-2024/1200-675-22065698-thumbnail-16x9-ssefefeefffe.jpg)
ದೆಹಲಿಯ ಐಎಎಸ್ ಕೋಚಿಂಗ್ ಕೇಂದ್ರಕ್ಕೆ ಮಳೆ ನೀರು ನುಗ್ಗಿ ಅನಾಹುತ (ETV Bharat)
Published : Jul 28, 2024, 6:54 AM IST
ಈ ಕುರಿತು ದೆಹಲಿ ಬಿಜೆಪಿ ನಾಯಕ ರಾಜೇಶ್ ಭಾಟಿಯಾ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ, ಆಮ್ ಆದ್ಮಿ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಈ ರಸ್ತೆಯಲ್ಲಿ ನೀರು ನಿಲ್ಲುತ್ತದೆ. ಭವಿಷ್ಯದಲ್ಲಿ ಗಂಭೀರ ಸಮಸ್ಯೆ ಎದುರಾಗಬಹುದು ಎಂದು ಸ್ಥಳೀಯ ಶಾಸಕ ದುರ್ಗೇಶ್ ಪಾಠಕ್ ಅವರ ಗಮನಕ್ಕೆ ನಿರಂತರವಾಗಿ ತರುತ್ತಿದ್ದೆ. ಹೀಗಿದ್ದರೂ ಅವರು ಗಮನ ಹರಿಸಿಲ್ಲ' ಎಂದು ಆರೋಪಿಸಿದ್ದಾರೆ.