ಪೋರಬಂದರ್(ಗುಜರಾತ್):ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ನ (ಐಸಿಜಿ) ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ 12.10ಕ್ಕೆ ಘಟನೆ ನಡೆಯಿತು.
ಐಸಿಜಿಯ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಹೆಚ್) ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಧರೆಗಪ್ಪಳಿಸಿದೆ ಎಂದು ಪೋರಬಂದರ್ ಪೊಲೀಸ್ ವರಿಷ್ಠಾಧಿಕಾರಿ ಭಗೀರಥ ಸಿಂಗ್ ಜಡೇಜಾ ಹೇಳಿದರು.