ಬರೇಲಿ(ಉತ್ತರಪ್ರದೇಶ):ಅಪ್ರಾಪ್ತ ವಿದ್ಯಾರ್ಥಿನಿಗೆ ಆಮಿಷವೊಡ್ಡಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಸ್ನೇಹಿತರಿಗೆ ಪೋಕ್ಸೊ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲ, ಅಪರಾಧಿಗಳಿಗೆ 2 ಲಕ್ಷದ 25 ಸಾವಿರ ರೂಪಾಯಿ ದಂಡವನ್ನೂ ವಿಧಿಸಿದೆ. ಆರೋಪಿಗಳು 2014ರಲ್ಲಿ ವಿದ್ಯಾರ್ಥಿನಿಯನ್ನು ಅಪಹರಿಸಿ ದೆಹಲಿಗೆ ಕರೆದೊಯ್ದಿದ್ದಾರೆ. ಬಳಿಕ ಆಕೆಯನ್ನು ಬೇರೆ ಬೇರೆ ಕಡೆ ಇಟ್ಟುಕೊಂಡು ಸಾಮೂಹಿಕ ಅತ್ಯಾಚಾರ ಎಸಗಿರುವುದು ತನಿಖೆ ಮೂಲಕ ಸಾಬೀತಾಗಿದೆ.
ಬರೇಲಿಯ ಫತೇಗಂಜ್ ವೆಸ್ಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ, ಅಪ್ರಾಪ್ತ ವಿದ್ಯಾರ್ಥಿನಿ ತಂದೆ 2014 ರ ಮೇ 13 ರಂದು ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ಮಗಳು ಮನೆಯಲ್ಲಿ ಒಬ್ಬಳೇ ಇದ್ದಾಗ ದೀಪಕ್, ಹರಿಓಂ ಮತ್ತು ರಾಜ್‌ಕುಮಾರ್ ಒಟ್ಟಿಗೆ ಆಮಿಷ ಒಡ್ಡಿದ್ದರು ಎಂದು ಆರೋಪಿಸಿದ್ದರು. ನನ್ನ ಮಗಳನ್ನು ಅವರೆಲ್ಲರೂ ಅಪಹರಿಸಿ ದೆಹಲಿಗೆ ಕರೆದೊಯ್ದಿದ್ದರು. ಇದಾದ ಬಳಿಕ ಪೊಲೀಸರು ಅಪ್ರಾಪ್ತ ವಿದ್ಯಾರ್ಥಿನಿ ಅಪಹರಣ ಪ್ರಕರಣ ದಾಖಲಿಸಿಕೊಂಡು ಹುಡುಕಾಟ ಆರಂಭಿಸಿದಾಗ 3 ತಿಂಗಳ ಬಳಿಕ ಆಕೆಯನ್ನು ಪತ್ತೆ ಹಚ್ಚಿದ್ದರು.
ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಾಗ ದೀಪಕ್ ಆಕೆಯನ್ನು ದೆಹಲಿಗೆ ಕರೆದೊಯ್ದಿದ್ದು, ಆತನೊಂದಿಗೆ ಹರಿಓಂ ಮತ್ತು ರಾಜ್‌ಕುಮಾರ್ ಕೂಡ ಇದ್ದರು ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಕೆಲವು ದಿನಗಳ ಕಾಲ ಅಲ್ಲಿ ಇರಿಸಿದನು ಮತ್ತು ನಂತರ ಅನೇಕ ನಗರಗಳಲ್ಲಿ ವಿವಿಧ ಸ್ಥಳಗಳಲ್ಲಿ ರೂಂ ಮಾಡಿದನು. ಈ ಸಮಯದಲ್ಲಿ ಮೂವರೂ ಹಲವಾರು ತಿಂಗಳುಗಳ ಕಾಲ ನನ್ನೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದರು ಎಂದು ಹೇಳಿಕೆ ನೀಡಿದ್ದಳು. ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಅಂದಿನಿಂದ ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇತ್ತು. ಘಟನೆ ನಡೆದಾಗ ಬಾಲಕಿಗೆ 16 ವರ್ಷ ವಯಸ್ಸಾಗಿತ್ತು.