ರಾಂಬನ್ (ಜಮ್ಮು ಮತ್ತು ಕಾಶ್ಮೀರ):ಜಿಲ್ಲೆಯ ಗಾಮವೊಂದರ ಮನೆಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಮೂವರು ಸಹೋದರಿಯರು ಹೊರಗಡೆ ಬರಲು ಸಾಧ್ಯವಾಗದೇ ಸಜೀವ ದಹನಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಉಖ್ರಾಲ್ ತಾಲೂಕಿನ ಧನ್ಮಸ್ತಾ - ತಾಜ್ನಿಹಾಲ್ ಗ್ರಾಮದ ಮೂರು ಅಂತಸ್ತಿನ ಮನೆಯಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ನೋಡು ನೋಡುತ್ತಿದ್ದಂತೆ ಬೆಂಕಿ ಇಡೀ ಮನೆಗೆ ಆವರಿಸಿತ್ತು. ಮೂವರು ಅಕ್ಕ - ತಂಗಿಯರು ಮೇಲಿನ ಮಹಡಿಯಲ್ಲಿ ಮಲಗಿದ್ದರಿಂದ ಅವರೆಲ್ಲರೂ ಕೆಳಗೆ ಬರಲು ಸಾಧ್ಯವಾಗದೇ ಒಳಗಡೆ ಸಿಲುಕಿಕೊಂಡಿದ್ದರು. ಪರಿಣಾಮ ಮೂವರು ಬೆಂಕಿಗಾಹುತಿಯಾಗಿದ್ದಾರೆ. ಮೃತರನ್ನು ಬಿಸ್ಮಾ (18), ಸೈಕಾ (14) ಮತ್ತು ಸಾನಿಯಾ (11) ಎಂದು ಗುರುತಿಸಲಾಗಿದೆ.