ಅರ್ಗತಲ: ರಾಜ್ಯದ 828 ವಿದ್ಯಾರ್ಥಿಗಳು ಎಚ್ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂಬ ವರದಿಗಳಿಗೆ ತ್ರಿಪುರಾ ಸರ್ಕಾರ ಸ್ಪಷ್ಟನೆ ನೀಡಿದ್ದು, ಇದು 17 ವರ್ಷಗಳ ಅಂಕಿಅಂಶ ಎಂದಿದೆ.
2023-24ರ ಅವಧಿಯಲ್ಲಿ ರಾಜ್ಯದಲ್ಲಿ 1,790 ಮಂದಿ ಎಚ್ಐವಿ ಸೋಂಕಿಗೆ ಒಳಗಾಗಿದ್ದಾರೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಸೋಂಕು ಹರಡುವುದನ್ನು ತಡೆಯಲು ಸರ್ಕಾರ ಹಲವು ಪ್ರಮುಖ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2022-23ರಲ್ಲಿ ಸೋಂಕಿನಿಂದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ 67 ಮಂದಿ ಸಾವನ್ನಪ್ಪಿದ್ದಾರೆ. 2023-24ರಲ್ಲಿ 44 ಜನರು ಸೋಂಕಿಗೆ ಒಳಗಾಗಿದ್ದಾರೆ. 2022 23ರಲ್ಲಿ 1,847 ಜನರಲ್ಲಿ ಎಚ್ಐವಿ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ 0.89ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
1999ರ ಏಪ್ರಿಲ್‌ನಿಂದ ತ್ರಿಪುರಾದಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. 2007 ಮತ್ತು 2024ರ ನಡುವೆ 828 ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗಿದ್ದು, 17 ವರ್ಷದ ಅವಧಿಯಲ್ಲಿ 47 ಮಂದಿ ಸಾವನ್ನಪ್ಪಿದ್ದರು.