ಚೆನ್ನೈ: ತಮಿಳುನಾಡಿನ ರಾಣಿಪೇಟ್ನಲ್ಲಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯ ಬಸ್ಗೆ ಟ್ರಕ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಕೋಲಾರ ಮೂಲದವರು ಎಂದು ತಿಳಿದುಬಂದಿದೆ.
ಮೃತರನ್ನು ಮಂಜುನಾಥನ್, ಕೃಷ್ಣಪ್ಪ, ಸಂಕರನ್ ಮತ್ತು ಸೋಮಶೇಖರನ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ರಾಣಿಪೇಟ್ ಪೊಲೀಸರು ತಿಳಿಸಿದ್ದಾರೆ.