ಥಾಣೆ, ಮಹಾರಾಷ್ಟ್ರ: ಇಲ್ಲಿನ ಶಹಪುರ್ ತಾಲೂಕಿನ ಗೊಥೇಘರ್ ಸಮೀಪದ ಥಾಣೆ - ಮುಂಬೈ - ನಾಸಿಕ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಬುಧವಾರ ಮುಂಜಾನೆ 3.50ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಟ್ರಕ್ ಕಂಟೈನರ್ ಬಸ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಇನ್ನೊಬ್ಬರ ಮಾಹಿತಿ ಲಭಿಸಿಲ್ಲ.
ವೇಗವಾಗಿ ಬರುತ್ತಿದ್ದ ಟ್ರಕ್ ಕಂಟೈನರ್ ನಿಯಂತ್ರಣ ಕಳೆದು ಕೊಂಡಿದ್ದು, ಬಸ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ಮತ್ತು ಟೆಂಪೊ ಕೂಡ ಅಪಘಾತಕ್ಕೆ ಈಡಾಗಿವೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ.