ಜಬಲ್‌ಪುರ (ಮಹಾರಾಷ್ಟ್ರ) :ಇಂದೋರ್-ಜಬಲ್‌ಪುರ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಜಬಲ್‌ಪುರ ನಿಲ್ದಾಣವನ್ನು ಸಮೀಪಿಸುತ್ತಿದ್ದಾಗ ಶನಿವಾರ ಮುಂಜಾನೆ ಹಳಿ ತಪ್ಪಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಗಿನಜಾವ 5.50 ರ ಸುಮಾರಿಗೆ ಅವಘಡ ಸಂಭವಿಸಿದೆ. ಪ್ರಯಾಣಿಕರಿಗೆ ಇದರಿಂದ ಯಾವುದೇ ಗಾಯಗಳಾಗಿಲ್ಲ ಎಂದು ಅವರು ಹೇಳಿದರು.
"ಇಂದೋರ್-ಜಬಲ್‌ಪುರ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (22191) ರೈಲಿನ ಎರಡು ಬೋಗಿಗಳು ಜಬಲ್‌ಪುರ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 6 ಅನ್ನು ಸಮೀಪಿಸುತ್ತಿದ್ದಾಗ ಹಳಿ ತಪ್ಪಿತು" ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ಲಾಟ್‌ಫಾರ್ಮ್‌ನಿಂದ ಕೇವಲ 50 ಮೀಟರ್ ದೂರದಲ್ಲಿ ರೈಲು ಹಳಿ ತಪ್ಪಿದ್ದು, ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ :ಕಾನ್ಪುರ ಬಳಿ ಸಬರಮತಿ ಎಕ್ಸ್‌ಪ್ರೆಸ್ ರೈಲು ಅಪಘಾತ: ಹಳಿತಪ್ಪಿದ 20 ಬೋಗಿಗಳು - Sabarmati Express Derailed