ಕರ್ನಾಟಕ

karnataka

ETV Bharat / bharat

ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ವಲಸೆ ಕಾರ್ಮಿಕರಿಗೆ ಗುಂಡೇಟು - ATTACK IN KASHMIR BUDGAM DISTRICT

ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (PTI)

By ETV Bharat Karnataka Team

Published : Nov 1, 2024, 10:55 PM IST

ಶ್ರೀನಗರ(ಜಮ್ಮ&ಕಾಶ್ಮೀರ): ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಕಳೆದ 30 ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಮೂರನೇ ದಾಳಿ ಇದಾಗಿದೆ.

ಭಯೋತ್ಪಾದಕರ ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರು ಕಾರ್ಮಿಕರು ಉತ್ತರ ಪ್ರದೇಶದ ಸಂಜಯ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಜಲ ಜೀವನ್ ಯೋಜನೆಯಲ್ಲಿ ಕೂಲಿ ಕಾರ್ಮಿಕರಾಗಿ ಇವರು ಕೆಲಸ ಮಾಡುತ್ತಿದ್ದರು. ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಮಿಕರು ನಿರ್ಮಾಣ ಕೆಲಸ ಮಾಡುತ್ತಿದ್ದರು. ಭಯೋತ್ಪಾದಕರು ಸಂಜೆ ಸಮಯದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಸಹರಾನ್‌ಪುರಕ್ಕೆ ಸೇರಿದ ಇಬ್ಬರ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತ ಪಡಿಸಿದ್ದಾರೆ.

ಗುಂಡಿನ ದಾಳಿ ನಡೆದ ತಕ್ಷಣ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಉಗ್ರರಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಲಸೆ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭದ್ರತಾ ಪರಿಶೀಲನಾ ಸಭೆಗಳ ನೇತೃತ್ವ ವಹಿಸಿ ದಾಳಿಕೋರರನ್ನು ಬಂಧಿಸಲು ಮತ್ತು ಇಂತಹ ದಾಳಿಗಳನ್ನು ತಡೆಯಲು ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಿದ ಬಳಿಕ ಈ ದಾಳಿಗಳು ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಭಾರತ - ಚೀನಾ ಯೋಧರ ವಾಪಸಾತಿ ಪ್ರಕ್ರಿಯೆ ಪೂರ್ಣ: ಪೂರ್ವ ಲಡಾಖ್​ನಲ್ಲಿ ಭಾರತದಿಂದ ಗಸ್ತು

ABOUT THE AUTHOR

...view details