ದಿಂಡಿಗಲ್ (ತಮಿಳುನಾಡು): ದಿಂಡಿಗಲ್ ಜಿಲ್ಲೆಯಲ್ಲಿನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ನಾಥಮ್ ಬಳಿ ಘಟನೆ ನಡೆದಿದ್ದು, ಘಟಕದ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರ ಸಾವು - Two killed in explosion - TWO KILLED IN EXPLOSION
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು, ಸಿಎಂ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.
Representational Image (ETV Bharat)
By PTI
Published : Aug 26, 2024, 7:27 AM IST
|Updated : Aug 26, 2024, 7:47 AM IST
ಮೃತರನ್ನು ಕಣ್ಣನ್ ಮತ್ತು ಮುನೀಶ್ವರನ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಶಿವಕಾಶಿಯವರು. ಸಾವಿಗೆ ಸಂತಾಪ ಸೂಚಿಸಿರುವ ಸಿಎಂ ಎಂ.ಕೆ. ಸ್ಟಾಲಿನ್ ಅವರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Last Updated : Aug 26, 2024, 7:47 AM IST