ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಕಣಿವೆಯಲ್ಲಿ ಉಗ್ರರ ಉಪಟಳ ಮತ್ತೆ ಶುರುವಾಗಿದೆ. ಉಧಮ್‌ಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
ಇಲ್ಲಿನ ಬಸಂತ್‌ಗಢದ ಖಾನಾರ್ಡ್ ಪ್ರದೇಶದ ಕಾಡುಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ತೀವ್ರ ಗುಂಡಿನ ಚಕಮಕಿ ನಡೆಯಿತು. ಗುಪ್ತಚರ ದಳದ ಮಾಹಿತಿಯ ಆಧಾರದ ಮೇಲೆ ಕಥುವಾದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಅಧಿಕಾರಿ ಸುನೀಲ್ ಬರ್ತ್ವಾಲ್ ಹೇಳಿದ್ದಾರೆ.