ನವದೆಹಲಿ:ದೇಶದ ಅಭಿವೃದ್ಧಿಗೆ ಕೈಗಾರಿಕಾ ಕ್ಷೇತ್ರದ ಪಾಲು ಹೆಚ್ಚಿರುವ ಕಾರಣ ಕೇಂದ್ರ ಸರ್ಕಾರ, ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಕಾರ್ಯಕ್ರಮದ ಅಡಿಯಲ್ಲಿ 12 ಕೈಗಾರಿಕಾ ಪಾರ್ಕ್‌ಗಳನ್ನು ಮಂಜೂರು ಮಾಡುವುದಾಗಿ ಘೋಷಿಸಿದೆ.
ಸಂಸತ್ತಿನಲ್ಲಿ ಮಂಗಳವಾರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ 12 ಕೈಗಾರಿಕಾ ಪಾರ್ಕ್‌ಗಳನ್ನು ಮಂಜೂರು ಮಾಡಲಾಗುವುದು. ಕಾರ್ಮಿಕರಿಗೆ ಬಾಡಿಗೆ ಮನೆಗಳನ್ನು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಒದಗಿಸಲಾಗುವುದು ಎಂದು ತಿಳಿಸಿದರು.
ಹಡಗು ಉದ್ಯಮದ ಸುಧಾರಣೆ:ಭಾರತೀಯ ಹಡಗು ಉದ್ಯಮದ ವ್ಯಾಪ್ತಿ ಮತ್ತು ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಭಾರತೀಯ ಹಡಗು ಉದ್ಯಮ ಕ್ಷೇತ್ರವನ್ನು ಸುಧಾರಿಸುವುದು ಮತ್ತು ಹೆಚ್ಚಿನ ಉದ್ಯೋಗ ಸೃಷ್ಟಿಸಲು ಉದ್ಯಮದ ಮಾಲೀಕತ್ವ, ಗುತ್ತಿಗೆ ಮತ್ತು ಅದನ್ನು ಮುನ್ನಡೆಸುವ ಬಗ್ಗೆ ಹೆಚ್ಚಿನ ಸುಧಾರಣೆಗಳನ್ನು ಜಾರಿಗೆ ತರಲಾಗುವುದು ಎಂದು ಸೀತಾರಾಮನ್ ಹೇಳಿದರು.