ನವದೆಹಲಿ:ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್‌ನಲ್ಲಿ ಕೇಂದ್ರ ಆರೋಗ್ಯ ಇಲಾಖೆಗೆ 90,958.63 ಕೋಟಿ ರೂ. ಘೋಷಿಸಿದ್ದಾರೆ. ಇದು ಕಳೆದ ವರ್ಷಕ್ಕಿಂತ ಶೇ.12.96ರಷ್ಟು ಹೆಚ್ಚಾಗಿದೆ. 2023-24ನೇ ಹಣಕಾಸು ವರ್ಷದಲ್ಲಿ ಈ ಕ್ಷೇತ್ರಕ್ಕೆ 80,517.62 ಕೋಟಿ ರೂ. ಘೋಷಿಸಿದ್ದರು.
ಮೂರು ಪ್ರಮುಖ ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ಸ್ ಸುಂಕ ತೆಗೆದುಹಾಕಿದ ಕೇಂದ್ರ ಸರ್ಕಾರ - HEALTH SECTOR IN BUDGET - HEALTH SECTOR IN BUDGET
Union Budget 2024: ಈ ಬಾರಿಯ ಬಜೆಟ್‌ನಲ್ಲಿ ಮೂರು ಪ್ರಮುಖ ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬಹಳ ಉಪಯೋಗವಾಗಲಿದೆ.
Published : Jul 23, 2024, 5:02 PM IST
|Updated : Jul 23, 2024, 5:52 PM IST
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸಲಾಗುವ ಮೂರು ಪ್ರಮುಖ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಇವುಗಳ ಮೇಲಿನ ಕಸ್ಟಮ್ ಸುಂಕವನ್ನು ಶೇಕಡಾ 10 ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ, ಕ್ಯಾನ್ಸರ್ ರೋಗಿಗಳಿಗೆ ಪರಿಹಾರ ನೀಡಲು ನಾನು ಮೂರು ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡುತ್ತಿದ್ದೇನೆ. ವೈದ್ಯಕೀಯ ಎಕ್ಸ್ ರೇ ಯಂತ್ರಗಳಲ್ಲಿ ಬಳಸುವ ಎಕ್ಸ್ ರೇ ಟ್ಯೂಬ್ ಮತ್ತು ಫ್ಲಾಟ್ ಪ್ಯಾನೆಲ್ ಡಿಟೆಕ್ಟರ್ಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕದಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸುತ್ತಿದ್ದೇನೆ ಎಂದು ಹೇಳಿದರು.
- ಆಯುಷ್ ಸಚಿವಾಲಯಕ್ಕೆ ಬಜೆಟ್ ಅನ್ನು ರೂ.3000 ಕೋಟಿಯಿಂದ ರೂ.3,712 ಕೋಟಿಗೆ ಹೆಚ್ಚಿಸಲಾಗಿದೆ.
- ಆರೋಗ್ಯ ಇಲಾಖೆಗೆ ಮೀಸಲಿಟ್ಟ ಒಟ್ಟು ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.87,656.90 ಕೋಟಿ ಮತ್ತು ಆರೋಗ್ಯ ಸಂಶೋಧನಾ ಇಲಾಖೆಗೆ ರೂ.3,301.73 ಕೋಟಿಗಳನ್ನು ಪ್ರಸ್ತಾಪಿಸಲಾಗಿದೆ.
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೊದಲಿಗಿಂತ ಈ ಬಾರಿ ಬಜೆಟ್‌ನಲ್ಲಿ ಅನುದಾನ ಹೆಚ್ಚಳವಾಗಿದೆ.
- ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ, ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮಕ್ಕೆ ಬಜೆಟ್ ಹಂಚಿಕೆ ಹೆಚ್ಚಾಗಿದೆ. ಈ ಹಿಂದೆ 31,550.87 ಕೋಟಿ ಮೀಸಲಿಟ್ಟಿದ್ದು, ಈ ಬಾರಿ 36,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.
- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ 7,300 ಕೋಟಿ ರೂ. ಮೀಸಲಿಡಲಾಗಿದೆ.
- ರಾಷ್ಟ್ರೀಯ ಟೆಲಿ-ಮೆಂಟಲ್ ಹೆಲ್ತ್ ಕಾರ್ಯಕ್ರಮದ ಬಜೆಟ್ ಅನ್ನು ರೂ.65 ಕೋಟಿಯಿಂದ ರೂ.90 ಕೋಟಿಗೆ ಹೆಚ್ಚಿಸಲಾಗಿದೆ.
- ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್‌ಗೆ 200 ಕೋಟಿ ರೂ. ಮೀಸಲಿಡಲಾಗಿದೆ.
- ಸ್ವಾಯತ್ತ ಆರೋಗ್ಯ ಸಂಸ್ಥೆಗಳ ಬಜೆಟ್ ಅನ್ನು ರೂ.17,250.90 ಕೋಟಿಯಿಂದ ರೂ.18,013.62 ಕೋಟಿಗೆ ಹೆಚ್ಚಿಸಲಾಗಿದೆ. ಇದರ ಭಾಗವಾಗಿ ದೆಹಲಿಯ ಏಮ್ಸ್ಗೆ 4,523 ಕೋಟಿ ರೂ. ಮೀಸಲಿಡಲಾಗಿದೆ.
- ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್‌ಗೆ ರೂ.2,295.12 ಕೋಟಿಯಿಂದ ರೂ.2,732.13 ಕೋಟಿಗೆ ಏರಿಕೆಯಾಗಿದೆ.
ಓದಿ:ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ? - Union Budget 2024