Union Budget 2024:ಅಭಿವೃದ್ಧಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಕೇಂದ್ರ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಮಾಜದ ಎಲ್ಲ ವರ್ಗದವರಿಗೂ ಇದರಿಂದ ಅನುಕೂಲವಾಗಲಿದೆ. ಯುವಕರು ಅನೇಕ ಅವಕಾಶಗಳನ್ನು ಪಡೆಯುತ್ತಾರೆ. ದಲಿತ ಮತ್ತು ಹಿಂದುಳಿದ ಸಮುದಾಯಗಳ ಜನರು ಬಲಿಷ್ಠರಾಗುತ್ತಾರೆ. ಬಜೆಟ್ ಮಂಡನೆ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಜೆಟ್ ಮಹಿಳೆಯರ ಆರ್ಥಿಕ ಸಹಭಾಗಿತ್ವ ಖಚಿತಪಡಿಸುತ್ತದೆ. ಇದಲ್ಲದೇ, ಆರ್ಥಿಕ ಅಭಿವೃದ್ಧಿಯೂ ಹೊಸ ವೇಗ ಪಡೆಯಲಿದೆ ಎಂದು ಹೇಳಿದರು.
ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಡತನದಿಂದ ಹೊರ ಬಂದಿದ್ದಾರೆ. ಈ ಬಜೆಟ್ ಹೊಸ ಮಧ್ಯಮ ವರ್ಗದ ಸಬಲೀಕರಣಕ್ಕಾಗಿದೆ. ಈ ಬಜೆಟ್ ಯುವಕರಿಗೆ ಅನಿಯಮಿತ ಅವಕಾಶಗಳನ್ನು ಒದಗಿಸುತ್ತದೆ. ಈ ಬಜೆಟ್ ಹೊಸ ಪ್ರಮಾಣವನ್ನು ನೀಡುತ್ತದೆ. ಈ ಬಜೆಟ್ ಹೊಸ ಮಧ್ಯಮ ವರ್ಗಕ್ಕೆ ಬಲವನ್ನು ನೀಡುತ್ತದೆ ಮತ್ತು ಮಹಿಳೆಯರು, ಸಣ್ಣ ಉದ್ಯಮಿಗಳು ಮತ್ತು MSME ಗಳಿಗೆ ಸಹಾಯ ಮಾಡುತ್ತದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.