ನವದೆಹಲಿ: ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 2014 ಹಾಗೂ 2019ರಲ್ಲಿ ಇದೇ ವಾರಾಣಸಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಈ ಬಾರಿಯೂ ಗೆಲುವಿನ ನಗೆ ಬೀರುವ ಮೂಲಕ ಹ್ಯಾಟ್ರಿಕ್ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
ಪ್ರಾರಂಭದ ಕೆಲವು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರು ಪರಾಜಯಗೊಂಡಿದ್ದಾರೆ. 2014 ಹಾಗೂ 2019ರಲ್ಲಿಯೂ ಕಾಂಗ್ರೆಸ್ ಅಜಯ್ ರೈ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಎರಡೂ ಸಲವೂ ಅಜಯ್ ಅವರು ಮೋದಿ ವಿರುದ್ಧ ಸೋಲನಭವಿಸಿದ್ದರು. ಆದರೂ ಈ ಬಾರಿ ಮತ್ತೆ ಮೋದಿ ವಿರುದ್ಧವೇ ಕಣಕ್ಕಿಳಿದಿದ್ದರು. ಇದೀಗ ಮೂರನೇ ಬಾರಿಯೂ ಸೋಲನಭವಿಸಿದ್ದಾರೆ.