ವಾರಾಣಸಿ, ಉತ್ತರಪ್ರದೇಶ: ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಎರಡು ಮನೆಗಳು ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಿಕ್ಕಿಬಿದ್ದಿದ್ದ ಏಳು ಮಂದಿಯನ್ನು ನಂತರ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರಂಭದಲ್ಲಿ ಎಂಟು ಜನರು ಅವಶೇಷಗಳಡಿ ಸಿಲುಕಿದ್ದರು ಆದರೆ, ನಂತರ ಅವರಲ್ಲಿ ಐವರನ್ನು ರಕ್ಷಿಸಲಾಯಿತು ಎಂದು ನಗರ ಪೊಲೀಸ್ ಆಯುಕ್ತ ಮೋಹಿತ್ ಅಗರವಾಲ್ ಮಾಹಿತಿ ನೀಡಿದ್ದಾರೆ.
ಈ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಮನೆಗಳು ಕುಸಿದಿವೆ ಎಂದು ಪೊಲೀಸ್ ಅಧಿಕಾರಿ ಕೌಶಲ್ ಶರ್ಮಾ ಹೇಳಿದ್ದಾರೆ. ಚೌಕ್ ಪ್ರದೇಶದ ಖೋಯಾ ಗಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ನಿರ್ಮಿಸಲಾಗಿದ್ದ ಎರಡು ಹಳೆಯ ಮನೆಗಳು ಇದ್ದಕ್ಕಿದ್ದಂತೆ ಕುಸಿದು ಬಿದ್ದಿವೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಎನ್‌ಡಿಆರ್‌ಎಫ್ ತಂಡವು ಅವಶೇಷಗಳಿಂದ ಐವರನ್ನು ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ರವಾನಿಸಿದೆ. ಕಬೀರ್ ಚೌರಾ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವುದು ಮತ್ತು ಗಾಯಾಳುಗಳಿಗೆ ಸಹಾಯ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಎನ್‌ಡಿಆರ್‌ಎಫ್ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.