ಹೈದರಾಬಾದ್(ತೆಲಂಗಾಣ):ಹೈದರಾಬಾದ್‌ನಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಬಾಚುಪಲ್ಲಿ ಎಂಬಲ್ಲಿ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಡಿಶಾ ಮತ್ತು ಛತ್ತೀಸ್‌ಗಢ ನಿವಾಸಿಗಳೆಂದು ಗುರುತಿಸಲಾಗಿದೆ.
ರೇಣುಕಾ ಎಲ್ಲಮ್ಮ ಕಾಲೊನಿಯಲ್ಲಿ ಗೋಡೆ ಕುಸಿದಿದೆ. ರಕ್ಷಣಾ ಸಿಬ್ಬಂದಿ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಗಾಂಧಿ ಆಸ್ಪತ್ರೆಗೆ ರವಾನಿಸಿದ್ದಾರೆ.