ಕರ್ನಾಟಕ

karnataka

ETV Bharat / bharat

ಜಲಪಾತದಲ್ಲಿ ಕೊಚ್ಚಿಹೋದ ಮಹಿಳೆ, ನಾಲ್ವರು ಅಪ್ರಾಪ್ತ ಮಕ್ಕಳು - Five drown in waterfall - FIVE DROWN IN WATERFALL

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಲೋನಾವಾಲಾ ಜಲಪಾತದಲ್ಲಿ ಮಹಿಳೆ ಮತ್ತು ನಾಲ್ವರು ಅಪ್ರಾಪ್ತ ಮಕ್ಕಳು ಸೇರಿದಂತೆ ಐವರು ಕೊಚ್ಚಿಕೊಂಡು ಹೋಗಿರುವ ಘಟನೆ ಜರುಗಿದೆ.

Five drown in waterfall
ಜಲಪಾತದಲ್ಲಿ ಕೊಚ್ಚಿಕೊಂಡು ಹೋದ ಐವರು (ETV Bharat)

By ETV Bharat Karnataka Team

Published : Jun 30, 2024, 7:26 PM IST

ಪುಣೆ (ಮಹಾರಾಷ್ಟ್ರ):ಜಲಪಾತದಲ್ಲಿ ಒಂದೇ ಕುಟುಂಬದ ಮಹಿಳೆ ಮತ್ತು ನಾಲ್ವರು ಅಪ್ರಾಪ್ತ ವಯಸ್ಸಿನ ಮಕ್ಕಳು ಸೇರಿದಂತೆ ಐವರು ಕೊಚ್ಚಿಕೊಂಡು ಹೋಗಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭಾನುವಾರ ಘಟನೆ ಮಧ್ಯಾಹ್ನ ನಡೆದಿದೆ. ಎಲ್ಲರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಉಳಿದ ಮೂವರಿಗಾಗಿ ರಕ್ಷಣಾ ತಂಡಗಳು ತೀವ್ರ ಶೋಧ ಕಾರ್ಯ ಕೈಗೊಂಡಿವೆ.

ಇಲ್ಲಿನ ಪ್ರಸಿದ್ಧ ಗಿರಿಧಾಮ ಲೋನಾವಾಲಾದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಸುಮಾರು 40 ವರ್ಷದ ಮಹಿಳೆ, 13 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. 6 ವರ್ಷದ ಇಬ್ಬರು ಬಾಲಕಿಯರು ಹಾಗೂ 4 ವರ್ಷದ ಬಾಲಕ ಇನ್ನೂ ಕಾಣೆಯಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಇವರೆಲ್ಲರೂ ಪುಣೆ ನಿವಾಸಿ ಅನ್ಸಾರಿ ಎಂಬುವರ ಕುಟುಂಬ ಸದಸ್ಯರಾಗಿದ್ದು, ಪ್ರವಾಸಕ್ಕೆಂದು ಬಂದಿದ್ದರು. ಭೂಶಿ ಅಣೆಕಟ್ಟಿನ ಸಮೀಪವಿರುವ ಗುಡ್ಡಗಾಡು ಕಾಡುಗಳಲ್ಲಿ ಹರಿಯುವ ಜಲಪಾತದಲ್ಲಿ ಆನಂದಿಸುತ್ತಿದ್ದರು. ಸ್ಥಳೀಯರು ಮತ್ತು ಪ್ರವಾಸಿಗರ ಮುಂದೆಯೇ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಭೂಶಿ ಅಣೆಕಟ್ಟಿನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಜಲಪಾತದಲ್ಲಿ ಮುಳುಗಿದ್ದಾರೆ. ಈ ವೇಳೆ, ಕುಟುಂಬ ಸದಸ್ಯರು ಪರಸ್ಪರ ರಕ್ಷಿಸಲು ಪ್ರಯತ್ನಿಸಿದರು. ಆದರೆ, ಭಾರೀ ಜಲಪಾತದಿಂದಾಗಿ ರಕ್ಷಿಸಲು ಸಾಧ್ಯವಾಗಲಿಲ್ಲ. ಈ ವಿಷಯ ತಿಳಿದ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ಇಲಾಖೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಸ್ಥಳೀಯರು ನೀಡಿರುವ ಮಾಹಿತಿ ಪ್ರಕಾರ, ಪಾಚಿಗಟ್ಟಿದ ಕಲ್ಲುಗಳ ಮೇಲೆ ಐವರು ಜಾರಿ ಬಿದ್ದಿರಬಹುದು. ನಂತರ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರಬಹುದು. ಹಾಗಾಗಿ ಭೂಶಿ ಅಣೆಕಟ್ಟೆಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಸ್ಥಳೀಯ ಶಿವದುರ್ಗ ಮಿತ್ರ ಮಂಡಳಿ ಹಾಗೂ ನಗರ ಪೊಲೀಸರ ನೆರವಿನೊಂದಿಗೆ ಈ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ಓದಿ:ಮಳೆ ಮಾಹಿತಿ: ರಾಜ್ಯದ ಈ ಆರು ಜಿಲ್ಲೆಗಳಿಗೆ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ಘೋಷಣೆ

ABOUT THE AUTHOR

...view details