ಕರ್ನಾಟಕ

karnataka

ETV Bharat / bharat

ಯುಪಿ ಸಿಎಂ ಯೋಗಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳೆ ಅರೆಸ್ಟ್​ - THREATENING MESSAGE

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಹಾಕಿದ ಮಹಿಳೆಯನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ.

ಯುಪಿ ಸಿಎಂ ಯೋಗಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳೆ ಅರೆಸ್ಟ್​
ಯುಪಿ ಸಿಎಂ ಯೋಗಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳೆ ಅರೆಸ್ಟ್​ (ANI File photo)

By PTI

Published : Nov 3, 2024, 6:32 PM IST

ಮುಂಬೈ( ಮಹಾರಾಷ್ಟ್ರ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ 24 ವರ್ಷದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿರುವ ಬಗ್ಗೆ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್ಸಿ ಮಾಡಿರುವ ಫಾತಿಮಾ ಖಾನ್ ಎಂದು ಗುರುತಿಸಲಾಗಿರುವ ಮಹಿಳೆ, ತನ್ನ ಕುಟುಂಬ ಸದಸ್ಯರೊಂದಿಗೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಹಾಸ್‌ನಗರ ಪ್ರದೇಶದಲ್ಲಿ ನೆಲೆಸಿದ್ದಳು. ಆಕೆಯ ತಂದೆ ಟಿಂಬರ್​ ವ್ಯಾಪಾರ ಮಾಡುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಹಿಳೆ ಉತ್ತಮ ವಿದ್ಯಾರ್ಹತೆ ಹೊಂದಿದ್ದರೂ ಮಾನಸಿಕವಾಗಿ ಅಸ್ಥಿರಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಶನಿವಾರ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದ್ದು, 10 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ಆದಿತ್ಯನಾಥ್ ರಾಜೀನಾಮೆ ನೀಡದಿದ್ದರೆ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್‌ ರೀತಿ ಅವರನ್ನು ಸಹ ಕೊಲ್ಲಲಾಗುವುದು ಎಂದು ಸಂದೇಶ ಬಂದಿತ್ತು ಅಧಿಕಾರಿ ಮಾಹಿತಿ ನೀಡಿದ್ದಾರೆ.

ತನಿಖೆಯ ಸಮಯದಲ್ಲಿ, ಖಾನ್ ಸಂದೇಶವನ್ನು ಕಳುಹಿಸಿದ್ದನ್ನು ಪತ್ತೆ ಹಚ್ಚಿರುವುದಾಗಿ ಅವರು ಹೇಳಿದರು.

ಮುಂಬೈ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಉಲ್ಲಾಸ್‌ನಗರ ಪೊಲೀಸರೊಂದಿಗೆ ಸಂಯೋಜಿತ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಪತ್ತೆಹಚ್ಚಿ ಆಕೆಯನ್ನು ಬಂಧಿಸಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನವೆಂಬರ್ 20 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಆದಿತ್ಯನಾಥ್ ಮಹಾರಾಷ್ಟ್ರಕ್ಕೆ ಬರುವ ಸಾಧ್ಯತೆ ಇರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: 'ಬಾಬಾ ಸಿದ್ದಿಕಿ ಕೊಂದಿದ್ದು ನಾವೇ': ಹತ್ಯೆ ಹೊಣೆ ಹೊತ್ತ ಲಾರೆನ್ಸ್​​ ಬಿಷ್ಣೋಯಿ ಗ್ಯಾಂಗ್​

ABOUT THE AUTHOR

...view details