ಕರ್ನಾಟಕ

karnataka

ETV Bharat / bharat

ಕೇವಲ 20 ಸಾವಿರ ರೂ. ಸಾಲ ತೀರಿಸದ್ದಕ್ಕೆ ಮಹಿಳೆ ಹತ್ಯೆ - Murder case in Hyderabad - MURDER CASE IN HYDERABAD

ಸಾಲ ತೀರಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರನ್ನು ಮತ್ತೊಬ್ಬ ಮಹಿಳೆ ಹತ್ಯೆ ಮಾಡಿರುವ ಘಟನೆ ಹೈದರಾಬಾದ್‌ನ ಎಲ್‌.ಬಿ. ನಗರ ಪ್ರದೇಶದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Murder case in Hyderabad  Hyderabad
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Aug 3, 2024, 11:17 AM IST

ಹೈದರಾಬಾದ್:ಸಾಲ ತೀರಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರನ್ನು ಮತ್ತೊಬ್ಬ ಮಹಿಳೆ ಹತ್ಯೆ ಮಾಡಿರುವ ಘಟನೆ ಹೈದರಾಬಾದ್‌ನ ಎಲ್‌.ಬಿ. ನಗರ ಪ್ರದೇಶದಲ್ಲಿ ನಡೆದಿದೆ. ನರಸಮ್ಮ ಸಾಲ ಪಡೆದಿದ್ದರು. ಸರೋಜಿನಿ ಎಂಬ ಮಹಿಳೆ 20 ಸಾವಿರ ರೂ. ಸಾಲ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹಣ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಎಷ್ಟು ಬಾರಿ ಕೇಳಿದರೂ ನರಸಮ್ಮ ತಲೆಕೆಡಿಸಿಕೊಂಡಿರಲಿಲ್ಲ. ಶುಕ್ರವಾರ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಇದರಿಂದ ಕುಪಿತಗೊಂಡ ಸರೋಜಿನಿ ನರಸಮ್ಮ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆಯಲ್ಲಿ ನರಸಮ್ಮ ತಲೆಗೆ ಜೋರಾಗಿ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಸರೋಜಿನಿಯನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಾರಾಗೃಹ ಶಿಕ್ಷೆ - Rape case Judgement

ABOUT THE AUTHOR

...view details