ಜೈಪುರ (ರಾಜಸ್ಥಾನ) :ಖಾಸಗಿ ಆಸ್ಪತ್ರೆಯೊಂದರ ಐಸಿಯುಗೆ ದಾಖಲಾಗಿದ್ದ 24 ವರ್ಷದ ಮಹಿಳೆಯ ಮೇಲೆ ನರ್ಸಿಂಗ್ ಸಹಾಯಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಪಿ ಚಿರಾಗ್ ಯಾದವ್ ಎಂಬಾತ ಮುಂಜಾನೆ 4 ಗಂಟೆ ಸುಮಾರಿಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಶಿವಾಜಿ ಪಾರ್ಕ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜ್‌ಪಾಲ್ ಸಿಂಗ್ ಹೇಳಿದ್ದಾರೆ.
ಈ ವೇಳೆ ನಾನು ಕಿರುಚಾಡಿದಾಗ ಆರೋಪಿಯು ತನಗೆ ಚುಚ್ಚುಮದ್ದನ್ನು ನೀಡಿದ. ನಂತರ ನಾನು ಪ್ರಜ್ಞಾಹೀನಳಾಗಿ ಬಿದ್ದೆ ಎಂದು ಸಂತ್ರಸ್ತೆ ತಿಳಿಸಿರುವ ಬಗ್ಗೆ ಎಸ್‌ಎಚ್‌ಒ ಮಾಹಿತಿ ನೀಡಿದ್ದಾರೆ. ಪತಿ ಮೊಬೈಲ್‌ಗೆ ಕರೆ ಮಾಡಿದ ನಂತರ ಮಹಿಳೆಗೆ ಪ್ರಜ್ಞೆ ಬಂದಿದೆ ಎಂದು ಸಿಂಗ್ ಹೇಳಿದ್ದಾರೆ. ನಂತರ ಆಕೆ ತನ್ನ ಕುಟುಂಬಕ್ಕೆ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾಳೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಮಹಿಳೆ ದಾಖಲಾಗಿದ್ದ ಬೆಡ್ ಬಳಿ ಹೋಗಿ ಕರ್ಟನ್‌ನಿಂದ ಮುಚ್ಚಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.
ಇದನ್ನೂ ಓದಿ :ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್ ಪ್ರಕರಣ: ನಾಲ್ವರು ಬಾಲಕರ ಬಂಧನ