ಮಸ್ಸೂರಿ (ಉತ್ತರಾಖಂಡ):ಮಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ಯುವಕನೊಬ್ಬನ ಶವ ಅಕಾಡೆಮಿ ಆವರಣದ ಸಿಬ್ಬಂದಿ ಕೊಠಡಿಯಲ್ಲಿ ಪತ್ತೆಯಾಗಿದೆ. ಯುವಕ ಮಹಿಳೆಯರಂತೆ ವೇಷ ಧರಿಸಿ ಸಾವನ್ನಪ್ಪಿದ್ದಾನೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡರೂ ಪೊಲೀಸರ ತನಿಖೆ ಬಳಿಕ ಸತ್ಯಾಂಶ ಹೊರ ಬೀಳಲಿದೆ.
ಪೊಲೀಸರ ಪ್ರಕಾರ, ಯುವಕ ಮಸ್ಸೂರಿ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಮಲ್ಟಿ ಟಾಸ್ಕ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಬುಧವಾರ ಸಂಜೆ ಡ್ಯೂಟಿ ಮುಗಿಸಿ ಕೋಣೆಗೆ ಹೋದಾತ ಬೆಳಗ್ಗೆಯಾದರೂ ಕೆಲಸಕ್ಕೆ ಬಂದಿರಲಿಲ್ಲ. ಅವನ ಸಹೋದ್ಯೋಗಿಗಳು ಕರೆದಾಗ ಕೊಠಡಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.