ಮುಂಬೈ: ಅದಾನಿ ಏರ್ ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಹೆಚ್ಎಲ್) 2023-2024ರ ಹಣಕಾಸು ವರ್ಷದಲ್ಲಿ (ಎಫ್ ವೈ 24) ತನ್ನ ವಿಮಾನಗಳ ಮೂಲಕ ಒಂದು ಮಿಲಿಯನ್ ಟನ್ ಸರಕುಗಳನ್ನು ಸಾಗಿಸಿದೆ ಎಂದು ಭಾನುವಾರ ತಿಳಿಸಿದೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇಕಡಾ 7 ರಷ್ಟು ಗಮನಾರ್ಹ ಬೆಳವಣಿಗೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು ಸರಕು ಸಾಗಾಟ 9,44,912 ಮೆಟ್ರಿಕ್ ಟನ್ ಆಗಿದೆ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.
ಕಂಪನಿಯು ಏಳು ವಿಮಾನ ನಿಲ್ದಾಣಗಳು 2024ರ ಹಣಕಾಸು ವರ್ಷದಲ್ಲಿ 10 ಲಕ್ಷ ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಿದ್ದು, ಶೇ 30.1ರಷ್ಟು ಮಾರುಕಟ್ಟೆ ಪಾಲು ಪಡೆದುಕೊಂಡಿದೆ.
"ಅದಾನಿ ಏರ್ ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ನಲ್ಲಿ ಕಾರ್ಯಾಚರಣೆಯ ದಕ್ಷತೆಗಾಗಿ ನಾವು ನಿರಂತರವಾಗಿ ಹೊಸ ಮಾನದಂಡಗಳನ್ನು ನಿಗದಿಪಡಿಸುತ್ತಿದ್ದೇವೆ. ಸರಕು ಟರ್ಮಿನಲ್ಗಳು ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿವೆ. ನಮ್ಮ ಟರ್ಮಿನಲ್ಗಳು ಈ ಹಣಕಾಸು ವರ್ಷದಲ್ಲಿ 1 ಮಿಲಿಯನ್ ಟನ್ ಸರಕುಗಳನ್ನು ನಿರ್ವಹಿಸಿವೆ. ಈ ಸಾಧನೆಯು ಭಾರತದಲ್ಲಿ ಅಂತರರಾಷ್ಟ್ರೀಯ ಮತ್ತು ದೇಶೀಯ ಏರ್ ಫ್ರೈಟ್ ಕಾರ್ಯಾಚರಣೆಗಳಲ್ಲಿ ಪ್ರಮುಖ ಕಂಪನಿಯಾಗಿ ನಮ್ಮ ಸ್ಥಾನವನ್ನು ಗಟ್ಟಿಗೊಳಿಸಿದೆ" ಎಂದು ಎಎಎಚ್ಎಲ್ ಸಿಇಒ ಅರುಣ್ ಬನ್ಸಾಲ್ ಹೇಳಿದರು.