ನವದೆಹಲಿ:ಸಿಬ್ಬಂದಿ ಕೊರತೆಯಿಂದ ಏರ್ ಇಂಡಿಯಾ ಇಂದು 70 ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳನ್ನು ರದ್ದುಗೊಳಿಸಿದೆ. ಕ್ಯಾಬಿನ್ ಸಿಬ್ಬಂದಿ ಸೇವೆಗೆ ಲಭ್ಯವಾಗದ ಕಾರಣ ಕೆಲವು ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ.
ನಮ್ಮ ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗದ ಸದಸ್ಯರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇದರ ಪರಿಣಾಮವಾಗಿ ವಿಮಾನಗಳು ವಿಳಂಬವಾಗಿವೆ ಮತ್ತು ರದ್ದುಗೊಂಡಿದೆ. ಈ ಘಟನೆಗಳ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ನಾವು ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ನಮ್ಮ ಪ್ರಯಾಣಿಕರಿಗೆ ಯಾವುದೇ ಅನಾನುಕೂಲವಾಗದಂತೆ ಸಮಸ್ಯೆಯನ್ನು ಪರಿಹರಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.