ನವದೆಹಲಿ:ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವ ಹಾಗೂ ಪರಿಸರ ರಕ್ಷಣೆ ಮತ್ತು ಚಾರ್ಜಿಂಗ್ ಮೂಲ ಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ. ಈ ಸಂಬಂದ 2024-25 ನೇ ಸಾಲಿನ ಮಧ್ಯಂತರ ಬಜೆಟ್ನಲ್ಲಿ ಇ- ವಾಹನ ಪರಿಸರ ವ್ಯವಸ್ಥೆ ವಿಸ್ತರಣೆ ಮಾಡುವುದಾಗಿ ಘೋಷಿಸಿದೆ.
ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಚಾರ್ಜಿಂಗ್ ಮೂಲಸೌಕರ್ಯವನ್ನು ಬೆಂಬಲಿಸುವ ಮೂಲಕ ಇ-ವಾಹನ ಪರಿಸರ ವ್ಯವಸ್ಥೆಯನ್ನು ವಿಸ್ತರಣೆ ಮತ್ತು ಬಲಪಡಿಸುವುದಾಗಿ ಹೇಳಿದೆ. ಪಾವತಿ ಭದ್ರತಾ ಕಾರ್ಯವಿಧಾನದ ಮೂಲಕ ಸಾರ್ವಜನಿಕ ಸಾರಿಗೆ ಜಾಲಗಳಿಗೆ ಇ-ಬಸ್‌ಗಳನ್ನು ಹೆಚ್ಚಾಗಿ ಬಳಸುವಂತೆ ಉತ್ತೇಜನ ನೀಡುವುದಾಗಿ ಘೋಷಿಸಿದೆ. ಈ ಮೂಲಕ ಪೆಟ್ರೋಲಿಯಂ ಉತ್ಪನ್ನಗಳ ಬಳಕೆ ಕಡಿಮೆ ಮಾಡಲು ಹಾಗೂ ಭವಿಷ್ಯದಲ್ಲಿ ಅದರ ಕೊರತೆಯನ್ನು ನೀಗಿಸಲು ಸರ್ಕಾರ ಈಗಿನಿಂದಲೇ ಕ್ರಮ ಕೈಗೊಳ್ಳಲು ಮುಂದಾಗಿದೆ.