ನವದೆಹಲಿ: 2024ರ ಮಧ್ಯಂತರ ಕೇಂದ್ರ ಬಜೆಟ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರ್ಜರಿ ತಯಾರಿ ನಡೆಸಿದ್ದಾರೆ. 2024ರ ಬಜೆಟ್ ತಯಾರಿ ಪ್ರಕ್ರಿಯೆ ಭಾಗವಾಗಿ 'ಹಲ್ವಾ' ಸಮಾರಂಭ ಬುಧವಾರ ನಡೆಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕರದ್ ಅವರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಸಲಾಯಿತು.
ಬಜೆಟ್ ತಯಾರಿಯ "ಲಾಕ್-ಇನ್" ಪ್ರಕ್ರಿಯೆ ಪ್ರಾರಂಭವಾಗುವ ಮೊದಲು ಸಾಂಪ್ರದಾಯಿಕ ಹಲ್ವಾ ಸಮಾರಂಭವನ್ನು ಸಾಂಪ್ರದಾಯಿಕವಾಗಿ ಪ್ರತಿ ವರ್ಷ ನಡೆಸಿಕೊಂಡು ಬರಲಾಗುತ್ತಿದೆ. ಹಣಕಾಸು ಸಚಿವಾಲಯ ಹೊರಡಿಸಿದ ಹೇಳಿಕೆಯ ಪ್ರಕಾರ, ಸಮಾರಂಭದ ಭಾಗವಾಗಿ, ಕೇಂದ್ರ ಹಣಕಾಸು ಸಚಿವರು ಬಜೆಟ್ ಪ್ರೆಸ್‌ನಲ್ಲಿ ಒಂದು ಸುತ್ತು ಹಾಕಿ ಸಿದ್ಧತೆಗಳನ್ನು ಪರಿಶೀಲಿಸಿದರು. "ಹಿಂದಿನ ಮೂರು ಪೂರ್ಣ ಕೇಂದ್ರ ಬಜೆಟ್‌ಗಳನ್ನು ಮಂಡಿಸಿದಂತೆಯೇ ಈ ಬಾರಿಯ ಕೇಂದ್ರದ ಮಧ್ಯಂತರ ಬಜೆಟ್ 2024 ಅನ್ನು ಸಹ ಕಾಗದರಹಿತ ರೂಪದಲ್ಲಿ ವಿತರಣೆ ಹಾಗೂ ಮಂಡನೆ ಮಾಡಲಾಗುತ್ತದೆ. ಫೆಬ್ರವರಿ ಒಂದರಂದು ಮಧ್ಯಂತರ ಬಜೆಟ್ ಮಂಡನೆಯಾಗಲಿದೆ ಎಂದು ಈಗಾಗಲೇ ಕೇಂದ್ರ ಸರ್ಕಾರ ಹೇಳಿದೆ