ಕರ್ನಾಟಕ

karnataka

ETV Bharat / business

ಗುಡ್​ ನ್ಯೂಸ್​- ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ: ಇವತ್ತು ಬೆಂಗಳೂರಿನಲ್ಲಿ ಎಷ್ಟಿದೆ ಬಂಗಾರದ ದರ ?, ಷೇರುಪೇಟೆಯಲ್ಲಿ ಏನಾಗ್ತಿದೆ? - Gold Rate

ದೇಶದಲ್ಲಿ ಚಿನ್ನದ ದರ ಗಣನೀಯವಾಗಿ ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದ ಪ್ರಮುಖ ನಗರಗಳಲ್ಲಿ ಪ್ರಸ್ತುತ ಚಿನ್ನ ಹಾಗೂ ಬೆಳ್ಳಿ ದರಗಳನ್ನು ಹೇಗಿದೆ ಎಂಬುದನ್ನು ನೋಡಿಕೊಂಡು ಬರೋಣ ಬನ್ನಿ.

Gold Rate   Bangaluru  Gold price  silver price
Gold Rate Today April 5th 2024: ಗುಡ್​ ನ್ಯೂಸ್​- ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಬಂಗಾರದ ದರ ಎಷ್ಟಿದೆ?

By ETV Bharat Karnataka Team

Published : Apr 5, 2024, 12:07 PM IST

ದೇಶದಲ್ಲಿ ಚಿನ್ನದ ಬೆಲೆಗಳು ತೀವ್ರವಾಗಿ ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಗುರುವಾರ 10 ಗ್ರಾಂ ಚಿನ್ನದ ಬೆಲೆ ರೂ.72,160 ರಷ್ಟಿದ್ದರೆ, ಶುಕ್ರವಾರ ರೂ.413 ಇಳಿಕೆಯಾಗಿ ರೂ.71,747ಕ್ಕೆ ತಲುಪಿದೆ. ಗುರುವಾರ ಪ್ರತಿ ಕೆ.ಜಿ ಬೆಳ್ಳಿ ಬೆಲೆ ರೂ.81,220ರಷ್ಟಿದ್ದರೆ, ಶುಕ್ರವಾರದ ವೇಳೆಗೆ ರೂ.75ರಷ್ಟು ಇಳಿಕೆಯಾಗಿ ರೂ.81,145ಕ್ಕೆ ತಲುಪಿದೆ.

  • ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ 69,980 ರೂ., ಪ್ರತಿ ಕೆಜಿ ಬೆಳ್ಳಿ ಬೆಲೆ 81,500 ರೂ. ಇದೆ.
  • ಬೆಳಗಾವಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 69,980 ರೂ., ಪ್ರತಿ ಕೆಜಿ ಬೆಳ್ಳಿ ಬೆಲೆ 81,500 ರೂ. ಇದೆ.
  • ಹೈದರಾಬಾದ್‌ನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ ರೂ.71,747 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ 81,145 ರೂ. ಇದೆ.
  • ವಿಜಯವಾಡದಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ ರೂ.71,747 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ 81,145 ರೂ. ಇದೆ.
  • ವಿಶಾಖಪಟ್ಟಣಂನಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ.71,747 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ 81,145 ರೂ. ಇದೆ.
  • ಪ್ರದ್ದಟೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ.71,747. ಪ್ರತಿ ಕೆಜಿ ಬೆಳ್ಳಿ ಬೆಲೆ 81,145 ರೂ. ಇದೆ.

ಗಮನಿಸಿ: ಮೇಲೆ ತಿಳಿಸಿದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಆದರೆ ಈ ಚಿನ್ನ ಹಾಗೂ ಬೆಳ್ಳಿ ದರಗಳು ಬದಲಾಗುತ್ತವೆ.

ಸ್ಪಾಟ್ ಚಿನ್ನದ ಬೆಲೆ?: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರಗಳು ಭಾರಿ ಇಳಿಕೆ ಕಂಡಿವೆ. ಗುರುವಾರ, ಒಂದು ಔನ್ಸ್ ಸ್ಪಾಟ್ ಚಿನ್ನದ ಬೆಲೆ 2,299 ಡಾಲರ್‌ಗಳಷ್ಟಿತ್ತು. ಆದರೆ, ಶುಕ್ರವಾರದ ಹೊತ್ತಿಗೆ ಅದು 23 ಡಾಲರ್‌ಗಳಷ್ಟು ಕಡಿಮೆಯಾಗಿ 2,276 ಡಾಲರ್‌ಗೆ ತಲುಪಿದೆ. ಪ್ರಸ್ತುತ, ಒಂದು ಔನ್ಸ್ ಬೆಳ್ಳಿಯ ಬೆಲೆ 26.53 ಡಾಲರ್ ಆಗಿದೆ.

ಕ್ರಿಪ್ಟೋಕರೆನ್ಸಿ ಬೆಲೆಗಳು ಹೇಗಿವೆ?: ಕ್ರಿಪ್ಟೋ ಕರೆನ್ಸಿ ವಹಿವಾಟು ಶುಕ್ರವಾರ ಲಾಭದಲ್ಲಿ ಮುಂದುವರಿಯುತ್ತಿವೆ.

ಪ್ರಮುಖ ಕ್ರಿಪ್ಟೋ ಕರೆನ್ಸಿಗಳ ಪ್ರಸ್ತುತ ಬೆಲೆ

  • ಬಿಟ್ ಕಾಯಿನ್- ರೂ.54,30,000
  • ಎಥೆರಿಯಮ್- ರೂ.2,72,499
  • ಟೆಥರ್- ರೂ.81.50
  • ಬೈನಾನ್ಸ್ ನಾಣ್ಯ- ರೂ.46,625
  • ಸೊಲೊನಾ- ರೂ.14,922

ಸ್ಟಾಕ್ ಮಾರುಕಟ್ಟೆ ಅಪ್​ಡೇಟ್​: ದೇಶೀಯ ಷೇರು ಮಾರುಕಟ್ಟೆಗಳು ಶುಕ್ರವಾರ ನಷ್ಟದೊಂದಿಗೆ ಪ್ರಾರಂಭವಾದವು. ಇದಕ್ಕೆ ಕಾರಣ ಅಂತರಾಷ್ಟ್ರೀಯ ಮಾರುಕಟ್ಟೆಯಿಂದ ಋಣಾತ್ಮಕ ಸಂಕೇತಗಳು ಬರುತ್ತಿದ್ದು, ಕಚ್ಚಾ ತೈಲ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿದೆ. ಪ್ರಸ್ತುತ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 108 ಅಂಕ ಕಳೆದುಕೊಂಡು 74,118ರಲ್ಲಿ ವಹಿವಾಟು ನಡೆಸುತ್ತಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಪ್ರಸ್ತುತ 54 ಅಂಕಗಳ ನಷ್ಟದ ನಂತರ 22,459ರಲ್ಲಿ ವಹಿವಾಟು ನಡೆಸುತ್ತಿದೆ.

ಲಾಭದಲ್ಲಿ ಮುಂದುವರಿಯುವ ಷೇರುಗಳು: ಎಚ್‌ಡಿಎಫ್‌ಸಿ ಬ್ಯಾಂಕ್, ನೆಸ್ಲೆ ಇಂಡಿಯಾ, ಎಂ & ಎಂ, ಸನ್‌ಫಾರ್ಮಾ, ಟೈಟಾನ್, ಬಜಾಜ್ ಫಿನ್‌ಸರ್ವ್

ನಷ್ಟದ ಷೇರುಗಳು:ಎಲ್ & ಟಿ, ಟಾಟಾ ಸ್ಟೀಲ್, ಆಕ್ಸಿಸ್ ಬ್ಯಾಂಕ್, ಪವರ್‌ಗ್ರಿಡ್, ಎನ್‌ಟಿಪಿಸಿ, ವಿಪ್ರೋ, ಏಷ್ಯನ್ ಪೇಂಟ್ಸ್, ಇನ್ಫೋಸಿಸ್.

ರೂಪಾಯಿ ಮೌಲ್ಯ:ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು 6 ಪೈಸೆಗಳಷ್ಟು ಕಡಿಮೆಯಾಗಿದೆ. ಪ್ರಸ್ತುತ ಡಾಲರ್ ಎದುರು ರೂಪಾಯಿ ವಿನಿಮಯ ದರ ರೂ.83.45 ಆಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ: ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ.99.84 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ ರೂ.85.93 ಆಗಿದೆ. ತೆಲುಗು ರಾಜ್ಯಗಳಾದ ಎಪಿ ಮತ್ತು ತೆಲಂಗಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.39 ರೂ. ಹಾಗೂ ಡೀಸೆಲ್ ಬೆಲೆ 95.63 ರೂ. ಇದೆ. ವಿಶಾಖಪಟ್ಟಣಂನಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.27 ರೂ. ಮತ್ತು ಡೀಸೆಲ್ ಬೆಲೆ 96.16 ರೂ. ಇದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ.94.76 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ ರೂ.87.66 ಆಗಿದೆ.

ಕಚ್ಚಾ ತೈಲ ಬೆಲೆ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಶೇಕಡಾ 0.35 ರಷ್ಟು ಹೆಚ್ಚಾಗಿದೆ. ಪ್ರಸ್ತುತ, ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 90.97 ಡಾಲರ್ ಆಗಿದೆ.

ಇದನ್ನೂ ಓದಿ:ರೆಪೋ ದರದಲ್ಲಿ ಈ ಬಾರಿಯೂ ಯಾವುದೇ ಬದಲಾವಣೆ ಇಲ್ಲ: ಜಿಡಿಪಿ ಶೇ 7 ರಷ್ಟಿರಲಿದೆ ಎಂದ ಆರ್​​ಬಿಐ - Repo Rate unchanged

ABOUT THE AUTHOR

...view details