ಏಪ್ರಿಲ್ 1, 2024 ರಿಂದ ಹೊಸ ಕ್ರೆಡಿಟ್ ಕಾರ್ಡ್ ನಿಯಮಗಳು ಅನ್ವಯವಾಗಲಿವೆ. ಈ ಬಗ್ಗೆ ಕ್ರೆಡಿಟ್ ಕಾರ್ಡ್ ಬಳಕೆದಾರರು ಗಮನದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ಕೆಲವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು 2024-25ನೇ ಹಣಕಾಸು ವರ್ಷದಲ್ಲಿ ತಮ್ಮ ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿ ಕೊಂಡಿವೆ. ಈ ಪಟ್ಟಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಯೆಸ್ ಬ್ಯಾಂಕ್ ಮುಂತಾದ ಪ್ರಮುಖ ಬ್ಯಾಂಕ್‌ಗಳು ಸೇರಿವೆ. ಲಾಂಜ್ ಪ್ರವೇಶ ಮತ್ತು ರಿವಾರ್ಡ್ ಪಾಯಿಂಟ್‌ಗಳ ವಿಷಯದಲ್ಲಿ ಇವು ಪ್ರಮುಖ ಬದಲಾವಣೆಗಳನ್ನು ಮಾಡಿವೆ. ಈ ಎಲ್ಲ ಪ್ರಮುಖ ಬದಲಾವಣೆಗೆಳು ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ.
ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ ನೀತಿಯನ್ನು ಬದಲಾಯಿಸಿದೆ. ಇಲ್ಲಿಯವರೆಗೆ ಬಾಡಿಗೆ ಪಾವತಿಯಲ್ಲಿ ರಿವಾರ್ಡ್ ಪಾಯಿಂಟ್‌ಗಳನ್ನು ನೀಡುತ್ತಿದ್ದ ಎಸ್‌ಬಿಐ, ಏಪ್ರಿಲ್ 1 ರಿಂದ ಅಂತಹ ರಿವಾರ್ಡ್ಗಳನ್ನು ನಿಲ್ಲಿಸುವುದಾಗಿ ಸ್ಪಷ್ಟಪಡಿಸಿದೆ. ಇದು AURUM, SBI ಕಾರ್ಡ್ ಎಲೈಟ್, ಸಿಂಪ್ಲಿ ಕ್ಲಿಕ್ ಮುಂತಾದ SBI ಕ್ರೆಡಿಟ್ ಕಾರ್ಡ್‌ಗಳ ಬಳಕೆದಾರರಿಗೆ ನಿರಾಸೆಯನ್ನುಂಟು ಮಾಡಿದೆ.
ಐಸಿಐಸಿಐ ಬ್ಯಾಂಕ್ ವಿಮಾನ ನಿಲ್ದಾಣಗಳ ಲಾಂಜ್ ಪ್ರವೇಶ ನಿಯಮಗಳನ್ನು ಸಹ ಬದಲಾಯಿಸಿದೆ. ಮುಂಬರುವ ತ್ರೈಮಾಸಿಕದಲ್ಲಿ ಈ ಸೌಲಭ್ಯವನ್ನು ಪಡೆಯಲು ಹಿಂದಿನ ತ್ರೈಮಾಸಿಕದಲ್ಲಿ ಕಾರ್ಡ್ ಮೂಲಕ ಕನಿಷ್ಠ 35,000 ರೂ ಖರ್ಚು ಮಾಡಬೇಕಾಗುತ್ತದೆ. ಇಷ್ಟು ಪ್ರಮಾಣದ ವ್ಯವಹಾರ ಮಾಡಿದ್ದರಷ್ಟೇ ಇದರ ಲಾಭ ಪಡೆದುಕೊಳ್ಳಬಹುದು. ಈ ನಿಯಮಗಳು ಕೋರಲ್ ಕ್ರೆಡಿಟ್ ಕಾರ್ಡ್, ಮೇಕ್ ಮೈ ಟ್ರಿಪ್ ಮತ್ತು ICICI ಬ್ಯಾಂಕ್ ಪ್ಲಾಟಿನಂ ಕ್ರೆಡಿಟ್ ಕಾರ್ಡ್ ಸೇರಿದಂತೆ ವಿವಿಧ ರೀತಿಯ ಕಾರ್ಡ್‌ಗಳಿಗೆ ಅನ್ವಯಿಸುತ್ತದೆ. ಈ ಬದಲಾವಣೆಗಳು 2024 ರ ಹೊಸ ಹಣಕಾಸು ವರ್ಷದ ಏಪ್ರಿಲ್ 1 ರಿಂದ ಜಾರಿಗೆ ಬರುತ್ತವೆ.