ಕರ್ನಾಟಕ

karnataka

ETV Bharat / business

ಆರ್​ಬಿಐನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ - RBI GOVERNOR

ಆರ್​ಬಿಐನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಿಸಲಾಗಿದೆ.

ಸಂಜಯ್ ಮಲ್ಹೋತ್ರಾ
ಸಂಜಯ್ ಮಲ್ಹೋತ್ರಾ (PTI)

By PTI

Published : Dec 9, 2024, 7:53 PM IST

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ 26ನೇ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಬುಧವಾರದಿಂದ ಮೂರು ವರ್ಷಗಳ ಅವಧಿಗೆ ಆರ್​ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಲಿರುವ ಮಲ್ಹೋತ್ರಾ ಅವರ ಹೆಸರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.

1990 ರ ಬ್ಯಾಚಿನ ರಾಜಸ್ಥಾನ ಕೇಡರ್​ನ ಐಎಎಸ್ ಅಧಿಕಾರಿ ಮಲ್ಹೋತ್ರಾ ಅವರು ಶಕ್ತಿಕಾಂತ ದಾಸ್ ಅವರ ನಂತರ ಆರ್​ಬಿಐ ಗವರ್ನರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿಸೆಂಬರ್ 10, 2024 ರಂದು ಕೊನೆಗೊಳ್ಳಲಿದೆ.

26ನೇ ಆರ್​ಬಿಐ ಗವರ್ನರ್ ಆಗಲಿರುವ ಮಲ್ಹೋತ್ರಾ, ಕಾನ್ಪುರದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್​ ಎಂಜಿನಿಯರಿಂಗ್ ಪದವೀಧರರಾಗಿದ್ದು, ಅಮೆರಿಕದ ಪ್ರಿನ್ಸ್ ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿ (Public Policy) ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ತಮ್ಮ 33 ವರ್ಷಗಳ ವೃತ್ತಿಜೀವನದಲ್ಲಿ, ಅವರು ವಿದ್ಯುತ್, ಹಣಕಾಸು ಮತ್ತು ತೆರಿಗೆ, ಮಾಹಿತಿ ತಂತ್ರಜ್ಞಾನ ಮತ್ತು ಗಣಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಸ್ತುತ, ಅವರು ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿ (ಕಂದಾಯ)ಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮುನ್ನ ಅವರು ಹಣಕಾಸು ಸಚಿವಾಲಯದ ಅಡಿಯಲ್ಲಿನ ಹಣಕಾಸು ಸೇವೆಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದರು.

ಮಲ್ಹೋತ್ರಾ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಹಣಕಾಸು ಮತ್ತು ತೆರಿಗೆಯ ವಿಷಯಗಳಲ್ಲಿ ವ್ಯಾಪಕ ಅನುಭವ ಹೊಂದಿದ್ದಾರೆ. ಪ್ರಸ್ತುತ ಅವರು ನೇರ ಮತ್ತು ಪರೋಕ್ಷ ತೆರಿಗೆಗಳಿಗೆ ಸಂಬಂಧಿಸಿದಂತೆ ತೆರಿಗೆ ನೀತಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ ದಾಸ್ ಅವರನ್ನು ಡಿಸೆಂಬರ್ 12, 2018 ರಂದು ಆರ್​ಬಿಐನ 25 ನೇ ಗವರ್ನರ್ ಆಗಿ ನೇಮಿಸಲಾಗಿತ್ತು. ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿತ್ತು. ಅವರ ವಿಸ್ತೃತ ಅಧಿಕಾರಾವಧಿ ಮಂಗಳವಾರ ಕೊನೆಗೊಳ್ಳಲಿದೆ.

ಇದನ್ನೂ ಓದಿ : ಭಾರತದಲ್ಲಿ ಪ್ರತಿವರ್ಷ 41 ಲಕ್ಷ ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆ, ತಮಿಳುನಾಡಿನಲ್ಲಿ ಅತ್ಯಧಿಕ

ABOUT THE AUTHOR

...view details