ಕರ್ನಾಟಕ

karnataka

ETV Bharat / education-and-career

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ನೇಮಕಾತಿ: ಬಿಇ ಪದವೀಧರರಿಗೆ ಉದ್ಯೋಗಾವಕಾಶ - Steel Authority of India Limited - STEEL AUTHORITY OF INDIA LIMITED

ಸ್ಟಿಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್​ ಮತ್ತು ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

249 mangement Trainee Job Recruitment in Steel Authority of India Limited
ಉದ್ಯೋಗ ಮಾಹಿತಿ (ಈಟಿವಿ ಭಾರತ್​)

By ETV Bharat Karnataka Team

Published : Jul 6, 2024, 1:56 PM IST

ಬೆಂಗಳೂರು: ಕೇಂದ್ರ ಸರ್ಕಾರದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್​ನಲ್ಲಿ ಖಾಲಿ ಮ್ಯಾನೇಜ್​ಮೆಂಟ್​ ಟ್ರೈನಿ (ತಾಂತ್ರಿಕ) ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 249 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧೆಡೆಯಲ್ಲಿರುವ ಪ್ರಾಧಿಕಾರದ ಕಾರ್ಯಾಚರಣೆ ಘಟಕ ಮತ್ತು ಗಣಿಗಳಲ್ಲಿ ಈ ಹುದ್ದೆ ಭರ್ತಿ ನಡೆಯಲಿದೆ.

ಹುದ್ದೆ ವಿವರ: 249 ಹುದ್ದೆಗಳ ಹಂಚಿಕೆ ಈ ರೀತಿ ಇದೆ.

  • ಕೆಮಿಕಲ್​- 10
  • ಸಿವಿಲ್​ -12
  • ಕಂಪ್ಯೂಟರ್​​ - 9
  • ಎಲೆಕ್ಟ್ರಿಕಲ್​ - 61
  • ಇನ್ಸುಮೆಂಟೆಷನ್​ -11
  • ಮೆಕಾನಿಕಲ್​ -69
  • ಮೆಟಲ್ಯೂರ್ಜಿ- 63

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿಯನ್ನು ಪೂರ್ಣಗೊಳಿಸಿರುಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅಧಿಸೂಚನೆ (ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್)

ಅರ್ಜಿ ಸಲ್ಲಿಕೆ ವಿವರ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ಮತ್ತು ಸಾಮಾನ್ಯ, ಒಬಿಸಿ, ಡಬ್ಲ್ಯೂಎಸ್​ ಅಭ್ಯರ್ಥಿಗಳಿಗೆ 700 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಗೇಟ್​ 2024 ಅಂಕ, ಗ್ರೂಪ್​ ಡಿಸ್ಕಷನ್​ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಜುಲೈ 5ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 25 ಆಗಿದೆ. ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sail.co.inಇಲ್ಲಿಗೆ ಭೇಟಿ ನೀಡಿ.

ಬಿಎಸ್​​ಎಫ್​ನಲ್ಲಿ ಹುದ್ದೆ;ಗಡಿ ಭದ್ರತಾ ಪಡೆಯಲ್ಲಿನ 1526 ಸಹಾಯಕ ಸಬ್​ ಇನ್ಸ್​​ಪೆಕ್ಟರ್​ (ಮಿನಿಸ್ಟ್ರಿಯಲ್​) ಮತ್ತು ಹೆಡ್​ ಕಾನ್ಸ್​ಟೇಬಲ್ (ಕ್ಲರ್ಕ್​)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 243 ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಮತ್ತು ವಾರೆಂಟ್​ ಆಫೀಸರ್​, 1283 ಹೆಡ್​​ ಕಾನ್ಸ್​ಟೇಬಲ್​​ ಮತ್ತು ಹವೀಲ್ದಾರ್​ (ಕ್ಲರ್ಕ್​) ಹುದ್ದೆಗಳ ನೇಮಕಾತಿ ನಡೆಯಲಿದೆ.

ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕ್ಲರ್ಕ್​ ಹುದ್ದೆಗಳ ನೇಮಕಾತಿ ಹಿನ್ನೆಲೆ ಅಭ್ಯರ್ಥಿಗಳು ಟೈಪಿಂಗ್​ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 25 ವರ್ಷ.

ಅಭ್ಯರ್ಥಿಗಳನ್ನು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ, ದೈಹಿಕ ದಾರ್ಢ್ಯತೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜೂನ್​ 9ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 8 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳುrectt.bsf.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ವಾಯುಸೇನೆಗೆ 'ಅಗ್ನಿವೀರ್'​ ನೇಮಕಾತಿ, ಇಲ್ಲಿದೆ ಸಂಪೂರ್ಣ ಮಾಹಿತಿ

ABOUT THE AUTHOR

...view details