ಬೆಂಗಳೂರು: ಪಶ್ಚಿಮ ರೈಲ್ವೆಯಲ್ಲಿ ಒಂದು ವರ್ಷದ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 5066ರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷ ಅವಧಿಯ ಈ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.
ಹುದ್ದೆ ವಿವರ:ಫಿಟ್ಟರ್, ವೆಲ್ಡರ್, ಟರ್ನರ್, ಮೆಷಿನಿಸ್ಟ್, ಕಾರ್ಪೆಂಟರ್, ಪೈಂಟರ್, ಎಲೆಕ್ಟ್ರಿಷಿಯನ್ ಸೇರಿದಂತೆ ಹಲವು ಹುದ್ದೆಗಳ ಭರ್ತಿ ನಡೆಸಲಾಗುವುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಬಳಿಕ ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ ಮತ್ತು ಪ. ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರ ವಿದ್ಯಾರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಮೇಲೆ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಅಕ್ಟೋಬರ್ 22 ಆಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ wr.indianrailways.gov.in ಭೇಟಿ ನೀಡಿ.
ಎಚ್ಎಎಲ್ನಲ್ಲಿ ಅಪ್ರೆಂಟಿಸ್ ಹುದ್ದೆ:ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್)ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನದ ಮೇಲೆ 12 ತಿಂಗಳ ಅವಧಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಕೇವಲ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.
ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಎನ್ಸಿವಿಟಿ ಪೋರ್ಟಲ್ನಲ್ಲಿ ನೋಂದಣಿ ಮಾಡಿದ ಬಳಿಕ ಅಧಿಸೂಚನೆಯಲ್ಲಿ ನೀಡಲಾದ ನಿಗದಿತ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರದೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ. ಟೆಕ್ನಿಕಲ್ ಟ್ರೈನಿಂಗ್ ಇನ್ಸಿಟಿಟ್ಯೂಟ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಸುರಂಜನ್ ದಾಸ್ ರಸ್ತೆ, ವಿಮಾನಪುರ ಪೋಸ್ಟ್, ಬೆಂಗಳೂರು -560017. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಅಕ್ಟೋಬರ್ 19. ಹೆಚ್ಚಿನ ಮಾಹಿತಿಗೆ hal-india.co.in ಭೇಟಿ ನೀಡಿ.
ಇದನ್ನೂ ಓದಿ:ಕೃಷಿ ಇಲಾಖೆಯ 945 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ