ಬೆಂಗಳೂರು: ಕೇಂದ್ರ ಸರ್ಕಾರದ ಸಿಎಸ್ಸಿ ಅಡಿಯಲ್ಲಿ ಕರ್ನಾಟಕ ಆಧಾರ್ ಸೇವಾ ಕೇಂದ್ರದಲ್ಲಿ ಆಧಾರ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುತ್ತಿದೆ.
ಹುದ್ದೆ ವಿವರ :ವಿವಿಧ ಜಿಲ್ಲೆಗಳಲ್ಲಿ ಒಟ್ಟು 8 ಹುದ್ದೆಗಳ ನೇಮಕಾತಿ ನಡೆಯಲಿದೆ
- ಬಾಗಲಕೋಟೆ - 1
- ಬೆಳಗಾವಿ - 1
- ಚಿಕ್ಕಮಗಳೂರು -1
- ಗದಗ - 1
- ಕೊಪ್ಪಳ - 1
- ಉಡುಪಿ - 1
- ಉತ್ತರ ಕನ್ನಡ - 1
- ಯಾದಗಿರಿ - 1
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ, ಐಟಿಐ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಈಗಾಗಲೇ ಆಧಾರ್ ಸೂಪರ್ವೈಸರ್ ಆಗಿ ಒಂದು ವರ್ಷದ ಹುದ್ದೆ ಅನುಭವ ಹೊಂದಿರಬೇಕು.